Wednesday, 21 Oct, 1.08 pm Kannada News Now

ಕರ್ನಾಟಕ
BIG BREAKING : ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಬೆಂಬಲಿಗರ ಹಲ್ಲೆ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಸಿರುವ ರಾಜರಾಜೇಶ್ವರಿ ನಗರ ವಿಧಾನಸಭೆ ಉಪಚುನಾವಣೆ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಬೆಂಬಲಿಗರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಆರ್.ಆರ್.ನಗರ ಉಪಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಮುನಿರತ್ನ ಬೆಂಗಲಿಗರು ಮಾಜಿ ಕಾರ್ಪೋರೇಟರ್ ವೇಲು ನಾಯ್ಕರ್ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ. ಸಂಸದ ಡಿ.ಕೆ. ಸುರೇಶ್, ಮಾಜಿ ಸಚಿವ ರಾಮಲಿಂಗ ರೆಡ್ಡಿ ಅವರು ಮುನಿರತ್ನ ಬೆಂಬಲಿಗರ ಮೇಲೆ ದೂರು ನೀಡಿದ್ದಾರೆ.

ಘಟನೆ ಬಳಿಕ ಸಂಸದ ಡಿ.ಕೆ. ಸುರೇಶ್ ಬಿಜೆಪಿ ಅಭ್ಯರ್ಥಿ ಮುನಿರತ್ನಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಚುನಾವಣೆಯಲ್ಲಿ ಪ್ರಚಾರ ಮಾಡಬೇಕು ಅಷ್ಟೇ, ಏನಾದರೂ ಕಾಂಗ್ರೆಸ್ ಕಾರ್ಯಕರ್ತರಿಗೆ ಧಮ್ಕಿ ಹಾಕಿದ್ರೆ, ಅಣ್ಣಾ ಕಾಯ್ತಾ ಇದ್ದಾರೆ ಅಂತೇಳಿ ಎಂದು ಮುನಿರತ್ನಗೆ ಬಹಿರಂಗ ಎಚ್ಚರಿಕೆ ನೀಡಿದ್ದಾರೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top