ಬೆಂಗಳೂರು: ಶಿಕ್ಷಣ ಇಲಾಖೆಯಿಂದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ( 5th and 8th School Students ) ಮೌಲ್ಯಾಂಕನ ಪರೀಕ್ಷೆ ನಡೆಸೋದಕ್ಕೆ ನಿರ್ಧರಿಸಲಾಗಿತ್ತು. ಆದ್ರೇ ಹೈಕೋರ್ಟ್ ಈ ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಬಳಿಕ ಮೇಲ್ಮನವಿಯ ನಂತ್ರ ಪರೀಕ್ಷೆ ನಡೆಸಲು ಅನುಮತಿಸಲಾಗಿತ್ತು.
ಇಂದು ಕರ್ನಾಟಕ ಶಾಲಾ ಗುಣಮಟ್ಟ, ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನ ಕಾರ್ಯನಿರ್ವಾಹ ನಿರ್ದೇಶಕರು ಮಾಹಿತಿ ನೀಡಿದ್ದಾರೆ. 2022-23ನೇ ಸಾಲಿನ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್ 13ರಿಂದ ಮೌಲ್ಯಾಂಕನವನ್ನು ನಡೆಸಲು ನಿರ್ಧರಿಸಲಾಗಿತ್ತು. ಆದ್ರೇ ಹೈಕೋರ್ಟ್ ಆದೇಶದಂತೆ ಈ ಪರೀಕ್ಷೆ ಮುಂದೂಡಲಾಗಿತ್ತು ಎಂದಿದ್ದಾರೆ.
ಮಾನ್ಯ ನ್ಯಾಯಾಲಯವು 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನವನ್ನು ನಡೆಸಲು ಅವಕಾಶ ನೀಡಿತ್ತು. ಈ ಹಿನ್ನಲೆಯಲ್ಲಿ ದಿನಾಂಕ 27-03-2023 ರಿಂದ 30-03-2023ರವೆರೆಗ 5ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನವನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನೂ 8ನೇ ತರಗತಿ ವಿದ್ಯಾರ್ಥಿಗಳಿಗೆ ದಿನಾಂಕ 27-03-2023ರಿಂದ 01-04-2023ರವರೆಗೆ ಮೌಲ್ಯಾಂಕನವನ್ನು ನಡೆಸಲಾಗುತ್ತಿದೆ ಎಂಬುದಾಗಿ ಪಬ್ಲಿಕ್ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ




