Dailyhunt Logo
  • Light mode
    Follow system
    Dark mode
    • Play Story
    • App Story
BIG NEWS : ಬೆಳಗಾವಿಯಲ್ಲಿ SDRF ಸಿಪಿಐ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

BIG NEWS : ಬೆಳಗಾವಿಯಲ್ಲಿ SDRF ಸಿಪಿಐ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

Kannada News Now 1 week ago

ಬೆಳಗಾವಿ : ರಾಜ್ಯ ವಿಪತ್ತು ನಿರ್ವಹಣಾ ಪಡೆ(ಎಸ್‌ಡಿಆರ್‌ಎಫ್)ಯ ಸಿಪಿಐ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಪಿಐ ಶ್ರೀಶೈಲ್ ಚೌಗಲಾ(37) ಮೃತಪಟ್ಟ ದುರ್ದೈವಿ. ಬೆಳಗಾವಿಯ ರಾಣಿ ಚನ್ನಮ್ಮ ನಗರದ ಅವರ ಮನೆಯ ರೂಮಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬಾಗಿಲು ಬಡಿದರೂ ತೆಗೆಯದೇ ಇದ್ದುದರಿಂದ ಅನುಮಾನಗೊಂಡ ಶ್ರೀಶೈಲ್ ಅವರ ಪತ್ನಿ ತಕ್ಷಣವೇ ಎಸ್‌ಡಿಆರ್‌ಎಫ್ ಸಿಬ್ಬಂದಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಅವರು ರೂಮಿನ ಬಾಗಿಲು ಮುರಿದು ಒಳಗೆ ನೋಡಿದಾಗ ವಿಷಯ ಗೊತ್ತಾಗಿದೆ. ತಕ್ಷಣ ಅವರನ್ನು ಹೊರತೆಗೆದು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಅಷ್ಟರಲ್ಲೇ ಅವರು ನಿಧನರಾಗಿದ್ದರು.

ಶ್ರೀಶೈಲ್ ಅವರು ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಗೊತ್ತಾಗಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Kannada News Now