Kannada News Now

1.8M Followers

BIG NEWS : ಜುಲೈ 1ರಿಂದ 2021-22ನೇ ಶೈಕ್ಷಣಿಕ ಸಾಲು ಆರಂಭಿಸಲು ನಿರ್ಧಾರ : ಶಿಕ್ಷಣ ಸಚಿವ ಸುರೇಶ್ ಕುಮಾರ್

24 Jan 2021.06:05 AM

ವಿಜಯಪುರ : ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯ ನಡುವೆಯ ಬೋರ್ಡ್ ಪರೀಕ್ಷೆಗಳಿರುವಂತ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಗೊಂಡಿದೆ. ಇದೀಗ 2021-22ನೇ ಶೈಕ್ಷಣಿಕ ವರ್ಷವನ್ನು ಜುಲೈ 1ರಿಂದ ಆರಂಭಿಸಲು ನಿರ್ಧರಿಸಲಾಗಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬಿಗ್ ನ್ಯೂಸ್ : ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಶಾಲಾ-ಕಾಲೇಜು ಆರಂಭ ಕುರಿತಂತೆ ಮಹತ್ವದ ಮಾಹಿತಿ ನೀಡಿದ ಶಿಕ್ಷಣ ಸಚಿವರು

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಬೇಕು ಎಂಬ ಬಗ್ಗೆ ಬಲವಾದಂತ ಕೂಗು ಎದ್ದಿದೆ. ಇದರಿಂದಾಗಿ ಆರೋಗ್ಯ ಮತ್ತು ಶಿಕ್ಷಣ ತಜ್ಞರೊಂದಿಗೆ ಶೀಘ್ರದಲ್ಲೇ ಚರ್ಚಿಸಿ, ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.

ಶಿವಮೊಗ್ಗ ಸ್ಪೋಟಕ ಪ್ರಕರಣ : ಆರೋಪಿಗಳು ಯಾರೇ ಆಗಿದ್ರೂ ಕ್ರಮ - ಸಿಎಂ ಯಡಿಯೂರಪ್ಪ

ಈಗಾಗಲೇ ರಾಜ್ಯದಲ್ಲಿ ಬೋರ್ಡ್ ಪರೀಕ್ಷೆಗಳನ್ನು ಹೊಂದಿರುವಂತ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲಾಗಿದೆ. ಮೊದಲ ಹಂತದಲ್ಲಿ ಈಗಿರುವ ಅರ್ಧ ದಿನದ ತರಗತಿಗಳ ಬದಲು ದಿನವಿಡೀ ಆರಂಭಿಸಿ, ಬಳಿಕ ಹಂತ ಹಂತವಾಗಿ ಉಳಿದ ತರಗತಿ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ನೀವು 'ಏರೋ ಇಂಡಿಯಾ-2021'ಕ್ಕೆ ಹೋಗೋಕೆ 'ಟಿಕೆಟ್ ಬುಕ್' ಮಾಡಿದ್ದೀರಾ.? ಹಾಗಿದ್ದರೇ ಹೀಗೆ ಮಾಡದಿದ್ರೇ 'ನೋ ಎಂಟ್ರಿ'.!

ಶಾಲಾ-ಕಾಲೇಜು ಪೂರ್ಣ ಪ್ರಮಾಣದಲ್ಲಿ ಯಾವಾಗ ಆರಂಭವಾಗಲಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಶಾಲಾ ಕಾಲೇಜುಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಬೇಕೆಂಬ ಕೂಗು ಬಲವಾಗಿದೆ. ಈ ಬಗ್ಗೆ ಆರೋಗ್ಯ ಮತ್ತು ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

'ಖಾಸಗಿ ಶಾಲಾ ಶುಲ್ಕ' ಪೋಷಕರು, ಶಿಕ್ಷಣ ಸಂಸ್ಥೆಗಳಿಗೆ ಹೊರೆಯಾಗದಂತೆ ಶೀಘ್ರವೇ ಕ್ರಮ - ಸಚಿವ ಸುರೇಶ್ ಕುಮಾರ್

ನಗರ ಪ್ರದೇಶಗಳಿಗಿಂತ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕೊರೋನಾ ನಡುವೆಯೂ ಆರಂಭವಾಗುತ್ತಿರುವ ಶಾಲೆಗಳಿಗೆ ದಾಖಲಾಗಿದ್ದಾರೆ. ಅವರನ್ನು ಅಲ್ಲಿಯೇ ಉಳಿಸಲು ಕ್ರಮ ಕೈಗೊಳ್ಳಲಾಗುತ್ತದೆ. 2021-22ನೇ ಶೈಕ್ಷಣಿಕ ಸಾಲು ಜುಲೈ 1ರಿಂದ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಉಚಿತ, ತಾಜಾ ಸುದ್ದಿಗಾಗಿ ನಮ್ಮ WhatAapp ಗ್ರೂಪ್‌ ಸೇರಿಕೊಳ್ಳಿ
https://bit.ly/3qRmLqX



Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags