Kannada News Now

1.7M Followers

BIG NEWS: ಕನ್ನಡದಲ್ಲಿ ಬರೆದ ಚೆಕ್ ಅಮಾನ್ಯಗೊಳಿಸಿದ ಬ್ಯಾಂಕಿಗೆ 85 ಸಾವಿರ ರೂ. ದಂಡ ವಿಧಿಸಿದ ಗ್ರಾಹಕರ ಆಯೋಗ

07 Sep 2022.5:59 PM

ಧಾರವಾಡ : ಕನ್ನಡದಲ್ಲಿ ಬರೆದ ಕಾಸೋಲೆ(ಚೆಕ್)ಯನ್ನು ಅಮಾನ್ಯ ಮಾಡಿದ ಹಳಿಯಾಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ 85,177 ರೂ.ದಂಡ ಪರಿಹಾರ ಪಾವತಿಸುವಂತೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶ ನೀಡಿದೆ.

ವಾದಿರಾಜಾಚಾರ್ಯ ಇನಾಮದಾರ ಎಂಬುವರು ತಮ್ಮ ಉಳಿತಾಯ ಖಾತೆಯಲ್ಲಿದ್ದ ಹಣ ಹಿಂಪಡೆಯಲು ಕನ್ನಡದಲ್ಲಿ ಬರೆದ ಚೆಕ್ ಅನ್ನು ಬ್ಯಾಂಕ್ ಗೆ ನೀಡಿದ್ದು, ಈ ವೇಳೆಯಲ್ಲಿ, ಹಳಿಯಾಳದ ಎಸ್‌ಬಿಐ ಶಾಖೆ ತಿರಸ್ಕರಿಸಿತ್ತು. ಬ್ಯಾಂಕ್ ಕಾರ್ಯವೈಖರಿ ವಿರುದ್ದ ನ್ಯಾಯಾಕ್ಕಾಗಿ,

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಮನವಿ ಸಲ್ಲಿಸಿದ್ದರು. ಕನ್ನಡ ಭಾಷೆಯಲ್ಲಿ ಬರೆದುದಕ್ಕಾಗಿ ಅಮಾನ್ಯ ಮಾಡಿರುವುದನ್ನು ಸೇವಾ ನ್ಯೂನ್ಯತೆ ಎಂದು ಪರಿಗಣಿಸಿ ಎಸ್‌ಬಿಐ ಬ್ಯಾಂಕ್ ಶಾಖೆಯು ದೂರುದಾರರಿಗೆ ಪರಿಹಾರ ಮತ್ತು ದಂಡ ರೂಪದಲ್ಲಿ ಒಟ್ಟು 85,177 ರೂ ಗಳನ್ನು ಪಾವತಿಸುವಂತೆ ಆದೇಶಿಸಿದೆ. ಆಯೋಗದ ಅಧ್ಯಕ್ಷರಾದ ಈಶಪ್ಪ ಭೂತೆ, ಸದಸ್ಯರಾದ ವಿ.ಅ. ಬೋಳಶೆಟ್ಟಿ ಮತ್ತು ಪಿ.ಸಿ. ಹಿರೇಮಠ ಈ ತೀರ್ಪು ನೀಡಿದ್ದಾರೆ.


Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags