Monday, 21 Sep, 8.33 am Kannada News Now

ಭಾರತ
BIG NEWS : ಕೊರೊನಾ ಸೋಂಕಿತರ ಗುಣಮುಖರ ಪ್ರಮಾಣದಲ್ಲಿ ಭಾರತಕ್ಕೆ ಅಗ್ರಸ್ಥಾನ!

ನವದೆಹಲಿ : ವಿಶ್ವದಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ಮರೆಯುತ್ತಿದ್ದು, ಕೊರೊನಾ ಸೋಂಕಿನಿಂದ ಗುಣಮುಖರಾದವರ ಪಟ್ಟಿಯಲ್ಲಿ ಭಾರತ ಮೊದಲ ಸ್ಥಾನಕ್ಕೇರಿದೆ.

ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ ಭಾರತದಲ್ಲಿ ಕೊರೊನಾ ಸೋಂಕಿಗೆ ತುತ್ತಾದವರ ಪೈಕಿ ಅತಿ ಹೆಚ್ಚು ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈ ಮೂಲಕ ಭಾರತ ಅಮೆರಿಕವನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದೆ. ಭಾರತದಲ್ಲಿ ಈವರೆಗೆ 43,14,606 ಮಂದಿ ಕೊರೊನಾ ವೈರಸ್ ನಿಂದ ಗುಣಮುಖರಾಗಿದ್ದಾರೆ. ಜಾಗತಿಕ ಒಟ್ಟು ಕೊರೊನಾ ಸೋಂಕಿತರ ಪೈಕಿ ಭಾರತದಲ್ಲಿ ಶೇ. 19 ರಷ್ಟು ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ವಿಶ್ವದಲ್ಲಿ ಅತೀ ಹೆಚ್ಚು ಕೊರೊನಾ ಸೋಂಕಿತರನ್ನು ಹೊಂದಿರುವ ಅಮೆರಿಕಾದಲ್ಲಿ ಈವರೆಗೆ 42,25,993 ಕೊರೊನಾ ಸೋಂಕಿತರು ಗುಣಮುಖರಾಗಿದ್ದು, ಜಾಗತಿಕವಾಗಿ ಅಮೆರಿಕ ಚೇತರಿಕೆ ಪ್ರಮಾಣ ಶೇ. 18.17 ರಷ್ಟಿದೆ ಎಂದು ವರದಿಯಾಗಿದೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top