Kannada News Now

1.8M Followers

BIG NEWS: 'ರಾಜ್ಯ ಸರ್ಕಾರಿ ನೌಕರ'ರಿಗೆ ಶಾಕಿಂಗ್ ನ್ಯೂಸ್: 'ಕಂಪ್ಯೂಟರ್ ಪರೀಕ್ಷೆ' ಉತ್ತೀರ್ಣರಾಗದೇ ಇದ್ರೇ, ಮುಂಬಡ್ತಿ, ವಾರ್ಷಿಕ ವೇತನ ಬಡ್ತಿ ಇಲ್ಲ

06 May 2022.12:29 PM

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ( Karnataka Government Employees ) ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ( Computer Literacy Test ) ಉತ್ತೀರ್ಣರಾಗುವುದು ಕಡ್ಡಾಯಗೊಳಿಸಲಾಗಿದೆ. ಈ ಪರೀಕ್ಷೆ ಉತ್ತೀರ್ಣಕ್ಕೆ ಹತ್ತು ವರ್ಷಗಳ ಅವಧಿಯೊಳಗೆ ಪಾಸ್ ಆಗುವುದು ಕಡ್ಡಾಯಗೊಳಿಸಲಾಗಿತ್ತು.

ಆದ್ರೇ.. ಇದೀಗ ದಿನಾಂಕ 31-12-2022ರೊಳಗೆ ಉತ್ತೀರ್ಣಗೊಳಿಸೋದನ್ನು ಕಡ್ಡಾಯಗೊಳಿಸಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ನೀಡಿದೆ.

'RTE ದಾಖಲಾತಿ' ಕುರಿತಂತೆ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: 2ನೇ ಸುತ್ತಿನ 'ಸೀಟು ಹಂಚಿಕೆ'

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಯಾವುದೇ ಸರ್ಕಾರಿ ನೌಕರನು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ ಎಂದು ತಿಳಿಸಿದೆ.

BREAKING NEWS: ರಾಜ್ಯ ಸರ್ಕಾರದಿಂದ 'ಆಡಳಿತ ಯಂತ್ರ'ಕ್ಕೆ ಮೇಜರ್ ಸರ್ಜರಿ: '17 ಐಎಎಸ್ ಅಧಿಕಾರಿ'ಗಳ ವರ್ಗಾವಣೆ

ಈ ನಿಯಮ ಪ್ರಾರಂಭವಾದ ದಿನಾಂಕದಿಂದ ಹತ್ತು ವರ್ಷಗಳ ಅವಧಿಯೊಳಗೆ ಪರೀಕ್ಷೆಯಲ್ಲಿ ಉತ್ತೀರ್ಣನಾಗದೇ ಇದ್ದಲ್ಲಿ, ಮುಂಬಡ್ತಿಗೆ ಅರ್ಹನಾಗತಕ್ಕದ್ದಲ್ಲ ಎಂಬುದಾಗಿ ತಿಳಿಸಿತ್ತು. ಜೊತೆಗೆ ಯಾವುದೇ ಸರ್ಕಾರಿ ನೌಕರನು, ಈ ನಿಯಮಗಳ ಪ್ರಾರಂಭದ ದಿನಾಂಕದಿಂದ ಹನ್ನೊಂದು ವರ್ಷಗಳ ಅವಧಿಯೊಳಗೆ ಪರೀಕ್ಷೆಯಲ್ಲಿ ಉತ್ತೀರ್ಣನಾಗದೇ ಇದ್ದಲ್ಲಿ, ವಾರ್ಷಿಕ ವೇತನ ಬಡ್ತಿ ಗಳಿಸಲು ಅರ್ಹನಾಗತಕ್ಕದ್ದಲ್ಲ ಎಂದಿತ್ತು.

BIGG NEWS: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ: ಇಬ್ಬರು ಪೊಲೀಸ್ ಅಧಿಕಾರಿಗಳು ಅರೆಸ್ಟ್

ಆದ್ರೇ.. ಇದೀಗ ಇದರ ಬದಲಾಗಿ ಯಾವುದೇ ಸರ್ಕಾರಿ ನೌಕರನು ವಾರ್ಷಿಕ ವೇತನ ಬಡ್ತಿಯನ್ನು ಪಡೆಯಲು, ದಿನಾಂಕ 31-12-2022ರೊಳಗೆ ಪರೀಕ್ಷೆಯಲ್ಲಿ ಉತ್ತೀರ್ಣನಾಗದೇ ಇದ್ದಲ್ಲಿ, ಮುಂಬಡ್ತಿ ಮತ್ತು ವಾರ್ಷಿಕ ವೇತನ ಬಡ್ತಿ ಗಳಿಸಲು ಅರ್ಹನಾಗತಕ್ಕದ್ದಲ್ಲ ಎಂಬುದಾಗಿ ತಿಳಿಸಿದೆ. ಈ ನಿಯಮ ಪ್ರಾರಂಭದ ದಿನಾಂಕದಿಂದ ಹತ್ತು ವರ್ಷಗಳ ಅವಧಿಯೊಳಗೆ ಎಂಬ ಪದಗಳ ಬದಲಿಗೆ ದಿನಾಂಕ 31-12-2022ರೊಳಗೆ ಎಂಬ ಪದ ಮತ್ತು ಅಂಕಿಗಳನ್ನು ಪ್ರತಿಷ್ಠಾಪಿಸತಕ್ಕದ್ದು ಎಂದು ತಿಳಿಸಿದೆ.


Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags