ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ದಿನಾಂಕಗಳನ್ನು ಮುಂದೂಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಮೇ. 24 ರಿಂದ ಜೂ. 16 ರವರೆಗೆ ದ್ವಿತೀಯ ಪಿಯುಸಿ ಮತ್ತು 21 ರಿಂದ ಜು. 5ರವರೆಗೆ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸಲು ಈಗಾಗಲೇ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಗಳು ವೇಳಾಪಟ್ಟಿಯನ್ನು ಪ್ರಕಟಿಸಿವೆ. ಆದರೆ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಮುಂದೂಡವ ಸಾಧ್ಯತೆ ಇದೆ ಎನ್ನಲಾಗಿದೆ.
ವಿದ್ಯಾರ್ಥಿಗಳು ಹಾಗೂ ಪೋಷಕರ ಹಿತದೃಷ್ಟಿಯಿಂದ ರಾಜ್ಯದ ಕೊರೊನಾ ಪರಿಸ್ಥಿತಿ ತಿಳಿದು ವೇಳಾಪಟ್ಟಿ ಮರು ನಿಗದಿ ಮಾಡುವ ಎಲ್ಲಾ ಸಾಧ್ಯತೆಗಳಿವೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.

