Kannada News Now

1.7M Followers

BIGG BREAKING NEWS: ಜ.31ರಿಂದ ರಾಜ್ಯಾಧ್ಯಂತ ನೈಟ್ ಕರ್ಪ್ಯೂ ರದ್ದು, ಬೆಂಗಳೂರಿನಲ್ಲಿ ಸೋಮವಾರದಿಂದ ಶಾಲೆ ಓಪನ್, ಹೋಟೆಲ್, ರೆಸ್ಟೋರೆಂಟ್ ಶೇ.50ರ ಮಿತಿ ವಾಪಾಸ್ | Night Curfew

29 Jan 2022.1:41 PM

ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾಧ್ಯಂತ ಜಾರಿಗೊಳಿಸಲಾಗಿದ್ದಂತ ನೈಟ್ ಕರ್ಪ್ಯೂವನ್ನು ( Night Curfew ) ರದ್ದುಪಡಿಸಲಾಗಿದೆ. ಇದಲ್ಲದೇ ಹೋಟೆಲ್, ರೆಸ್ಟೋರೆಂಟ್, ಪಬ್ ಗಳಲ್ಲಿನ ಶೇ.50ರ ಮಿತಿಯನ್ನು ವಾಪಾಸ್ ಪಡೆಯಲಾಗಿದೆ.

ಆದ್ರೇ ಸಿನಿಮಾ ಮಂದಿರಗಳಲ್ಲಿ ಶೇ.50ರ ಮಿತಿಯನ್ನು ಮುಂದುವರೆಸಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.

ಈ ಕುರಿತಂತೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಕೋವಿಡ್ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ತಜ್ಞರು ನೀಡಿದಂತ ವರದಿಯ ಆಧಾರದ ಮೇಲೆ ಹಲವು ವಿಚಾರಗಳನ್ನು ಚರ್ಚಿಸಲಾಗಿದೆ. ರಾಜ್ಯದಲ್ಲಿ 0-14 ವರ್ಷ 22,318 ಮಕ್ಕಳಿಗೆ ಕೊರೋನಾ, 6,307 ಜನರು ಕೋವಿಡ್ ನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 401 ಜನರು ಮಾತ್ರವೇ ಕೊರೋನಾದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. 146 ಮಕ್ಕಳು ಮಾತ್ರವೇ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಕೋವಿಡ್ ಪಾಸಿಟಿವಿಟಿ ದರ 19-01-2022ರಂತೆ ಶೇ.18.08ರಷ್ಟಿದೆ. ಪೀಕ್ ಸಂದರ್ಭದಲ್ಲಿ ಶೇ.33ರಷ್ಟು ಇತ್ತು. ಈಗ 20.09ರಷ್ಟಕ್ಕೆ ಬಂದಿದೆ ಈಗ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರೋ ಕಾರಣದಿಂದಾಗಿ ಜನವರಿ 31ರಿಂದ ಜಾರಿಗೆ ಬರುವಂತೆ ರಾಜ್ಯಾಧ್ಯಂತ ನೈಟ್ ಕರ್ಪ್ಯೂ ಅನ್ನು ರದ್ದು ಪಡಿಸಲಾಗಿದೆ ಎಂಬುದಾಗಿ ತಿಳಿಸಿದರು.

ಇನ್ನೂ ಮುಚ್ಚಿದ ಸ್ಥಳಗಳಲ್ಲಿ 200 ಜನರಿಗೆ ಮದುವೆಗೆ ಅವಕಾಶ, ಓಪನ್ ಸ್ಥಳದಲ್ಲಿ 300ಕ್ಕೆ ಅವಕಾಶ ನೀಡಲಾಗಿದೆ. ಕಚೇರಿ ಕೆಲಸದ ಶೇ.50ರ ಮಿತಿಯನ್ನು ವಾಪಾಸ್ ಪಡೆಯಲಾಗಿದೆ. ಧಾರ್ಮಿಕ ಸ್ಥಳಗಳಲ್ಲಿ ಸೇವೆ ಬಂದ್ ಆಗಿತ್ತು. ಆ ಸೇವೆಗಳನ್ನು ಪುನರಾರಂಭಿಸೋದಕ್ಕೆ ಅವಕಾಶ ನೀಡಲಾಗಿದೆ. ಅರ್ಚನೆ, ಮಂಗಳಾರತಿಗೆ ಅವಕಾಶ ನೀಡಲಾಗಿದೆ. ಶೇ.50ರ ಜನರ ಮುತಿ ಮುಂದುವರೆಯಲಿದೆ ಎಂದರು.

ಜಾತ್ರೆ, Rally, ಧರಣಿ, ಪ್ರತಿಭಟನೆ ಸೇರಿದಂತೆ ಹೆಚ್ಚು ಜನರು ಸೇರುವಂತ ಕಾರ್ಯಕ್ರಮಗಳನ್ನು ನಿರ್ಬಂಧಿಸಲಾಗಿದೆ. ಜಿಮ್ ಗಳಿಗೆ ಶೇ.50ರ ಮಿತಿಯನ್ನು ನಿಗದಿ ಪಡಿಸಲಾಗಿದೆ. ಸ್ಪೋರ್ಟ್ಸ್ ಸ್ಟೇಡಿಯಂಗಳ ಮಿತಿ ಶೇ.50ರಷ್ಟು ಮುಂದುವರೆಸಲಾಗಿದೆ. ಮಹಾರಾಷ್ಟ್ರಾ, ಕೇರಳ, ಗೋವಾದಿಂದ ಬರೋರಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ ಎಂದರು.


Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags