ಕತ್ರಾ: ಜಮ್ಮುಕಾಶ್ಮೀರದ ಕತ್ರಾದ ಮಾತಾ ವೈಷ್ಣೂದೇವಿ ಭವನದಲ್ಲಿ ನಡೆದ ಕಾಲ್ತುಳಿತದಲ್ಲಿ 12 ಭಕ್ತರು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಘಟನೆ ಸಂಬಂಧ ಪ್ರಧಾಣಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮಾತಾ ವೈಷ್ಣನೋ ದೇವಿ ಭವನದಲ್ಲಿ ಕಾಲ್ತುಳಿತದಿಂದಾಗಿ ಉಂಟಾದ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ.
Life certificate: ಪಿಂಚಣಿದಾರರ ಜೀವಿತ ಪ್ರಮಾಣ ಪತ್ರ ಸಲ್ಲಿಕೆಗೆ ಫೆ. 28ರವರೆಗೆ ಗಡುವು ವಿಸ್ತರಣೆ
ಕತ್ರಾದ ಮಾತಾ ವೈಷ್ಣನೋ ದೇವಿ ಭವನದಲ್ಲಿ ನಡೆದ ಕಾಲ್ತುಳಿತದಲ್ಲಿ 12 ಸಾವು, 13 ಜನರು ಗಾಯಗೊಂಡಿದ್ದು, ಇಂದು ಮುಂಜಾನೆ 2.45 ರ ಸುಮಾರಿಗೆ ಈ ಘಟನೆ ಸಂಭವಿಸಿದೆಜಮ್ಮು ಮತ್ತು ಕಾಶ್ಮೀರ ಡಿಜಿಪಿ ದಿಲ್ ಬಾಗ್ ಸಿಂಗ್ ಮಾಹಿತಿ ನೀಡಿದ್ದಾರೆ
ಸಮುದಾಯ ಆರೋಗ್ಯ ಕೇಂದ್ರದ ಬ್ಲಾಕ್ ವೈದ್ಯಕೀಯ ಅಧಿಕಾರಿ ಡಾ. ಗೋಪಾಲ್ ದತ್ ಮಾಹಿತಿ ನೀಡಿದ್ದು, ದೆಹಲಿ, ಹರಿಯಾಣ, ಪಂಜಾಬ್ ಮತ್ತು ಜಮ್ಮುಕಾಶ್ಮೀರದ ಒಟ್ಟು 12 ಭಕ್ತರು ಮೃತಪಟ್ಟಿದ್ದು, ಪೊಲೀಸರು ರಕ್ಷಣಾ ಕಾರ್ಯಾಚರಣೆ ಯನ್ನು ಪ್ರಾರಂಭಿಸಿದ್ದಾರೆ.
ಇನ್ನು ವೈಷ್ಣೋದೇವಿ ದೇಗುಲದಲ್ಲಿ ಮೃತಪಟ್ಟ ಭಕ್ತರ ಕುಟುಂಬ ಮೃತರ ಕುಟುಂಬಗಳಿಗೆ ಜಮ್ಮು-ಕಾಶ್ಮೀರ ಸರ್ಕಾರ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದು, ಗಾಯಾಳುಗಳಿಗೆ 2 ಲಕ್ಷ ರೂ. ಘೋಷಿಸಿದೆ.

