Kannada News Now
Kannada News Now

BIGG BREAKING : ನಿತ್ಯೋತ್ಸವ ಕವಿ ಕೆ ಎಸ್ ನಿಸಾರ್ ಅಹಮದ್ ನಿಧನ

BIGG BREAKING : ನಿತ್ಯೋತ್ಸವ ಕವಿ ಕೆ ಎಸ್ ನಿಸಾರ್ ಅಹಮದ್ ನಿಧನ
  • 1057d
  • 2.5k shares

ಬೆಂಗಳೂರು : ಕನ್ನಡ ಸಾರಸ್ವತ ಲೋಕದ ದಿಗ್ಗಜ, ಕೆಎಸ್ ನಿಸಾರ್ ಅಹಮದ್(84) ನಿಧನರಾಗಿದ್ದಾರೆ. ಈ ಮೂಲಕ ನಿತ್ಯೋತ್ಸವ ಕವಿ ಇನ್ನಿಲ್ಲವಾಗಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆ ಎಸ್ ನಿಸಾರ್ ಅಹಮದ್ ಇಂದು ವಿಧಿವಶರಾಗಿದ್ದಾರೆ.

ಪ್ರೊ. ಕೆ.ಎಸ್.ನಿಸಾರ್ ಅಹಮದ್ ಬೆಂಗಳೂರು ಜಿಲ್ಲೆಯ ದೇವನಹಳ್ಳಿಯಲ್ಲಿ ಫೆಬ್ರುವರಿ 5, 1936ರಲ್ಲಿ ಜನಿಸಿದರು. 1959ರಲ್ಲಿ ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. 1994ರ ವರೆಗೆ ವಿವಿಧ ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗು ಪ್ರಾಧ್ಯಾಪಕರಾಗಿ ಕೆಲಸ ಮಾಡಿ ನಿವೃತ್ತರಾದರು. ಇಂತಹ ಕವಿ ಅನಾರೋಗ್ಯದಿಂದ ಕಳೆದ ಹಲವು ದಿನಗಳಿಂದ ಬಳಲುತ್ತಿದ್ದರು. ಇದೀಗ ವಯೋ ಸಹಜ ಕಾಯಿಲೆಯಿಂದಾಗಿ ನಿಧನರಾಗಿದ್ದಾರೆ. ಈ ಮೂಲಕ ಕನ್ನಡ ಸಾರಸ್ವತ ಲೋಕದ ಕೊಂಡಿಯೊಂದು ಕಳಚಿದಂತೆ ಆಗಿದೆ.

No Internet connection

Link Copied