Wednesday, 08 Sep, 7.08 pm Kannada News Now

ಕರ್ನಾಟಕ
BIGG NEWS : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : 2021-22 ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

* ರಂಜಿತ್ ಶೃಂಗೇರಿ

ಕೆಎನ್‌ಎನ್ ಡಿಜಿಟಲ್ ಡೆಸ್ಕ್ : ಅಲ್ಪಸಂಖ್ಯಾತ ( ಮುಸ್ಲಿಂ, ಕ್ರಿಶ್ಚಿಯನ್, ಸಿಖ್ಖರು ಜೈನರು, ಬೌದ್ದ, ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ 2021-22 ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಅಲ್ಪಸಂಖ್ಯಾತ ( ಮುಸ್ಲಿಂ, ಕ್ರಿಶ್ಚಿಯನ್, ಸಿಖ್ಖರು , ಜೈನರು, ಬೌದ್ದ, ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ 2021-22 ನೇ ಸಾಲಿನ ನ್ಯಾಷನಲ್ ಸ್ಕಾಲರ್ಶಿಪ್( NSP) ವಿದ್ಯಾರ್ಥಿ ವೇತನ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅಲ್ಪಸಂಖ್ಯಾತ ಸಮುದಾಯದ(ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ) 1ನೇ ತರಗತಿಯಿಂದ ಉನ್ನತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು..

ಅರ್ಜಿ ಸಲ್ಲಿಸಲು ಬೇಕಾಗಿರುವ ಅಗತ್ಯ ದಾಖಲೆಗಳು :-

* ವಿದ್ಯಾರ್ಥಿಯ ಆಧಾರ್ ಕಾರ್ಡ್.

* ಪೋಷಕರ ಆಧಾರ್ ಕಾರ್ಡ್.

* ಬ್ಯಾಂಕ್ ಪಾಸ್ ಪುಸ್ತಕ

* ರೇಶನ್ ಕಾರ್ಡ್.

* ಜಾತಿ ಮತ್ತು ಆದಾಯ ಪ್ರಮಾಣ ಪತ್ರ.

* ಅಂಕ ಪಟ್ಟಿ / ಮಾರ್ಕ್ಸ್ ಕಾರ್ಡ್

* ಶಾಲಾ ಶುಲ್ಕದ ರಶೀದಿ

* ಪಾಸ್ ಪೋರ್ಟ್ ಅಳತೆಯ ಭಾವಚಿತ್ರ.

* ಮೊಬೈಲ್ ಸಂಖ್ಯೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

FOR PREMATRIC SCHOLARSHIP : 15 NOVEMBER 2021

FOR POSTMATRIC SCHOLARSHIP : 30 NOVEMBER 2021

ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು https://Scholarships.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಸಲ್ಲಿಸಲು ಹಾಗು ಹೆಚ್ಚಿನ ಮಾಹಿತಿಗೆ ವಿದ್ಯಾರ್ಥಿಗಳು ಆಯಾ ತಾಲ್ಲೂಕಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಶಾಲಾ-ಕಾಲೇಜು ಕಛೇರಿ ಸಂಪರ್ಕಿಸಬಹುದಾಗಿದೆ.



Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top