Tuesday, 04 May, 9.39 pm Kannada News Now

ಹೋಮ್
BIGG NEWS : ಕರ್ನಾಟಕದಲ್ಲಿ ಆಕ್ಸಿಜನ್ ಕೊರತೆ ನೀಗಿಸಲು ಪ್ರಧಾನಿ ಮೋದಿಗೆ ಪತ್ರ ಬರೆದ ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಐವತ್ತು ಸಾವಿರದ ಸನಿಹ ಬಂದಿದ್ದು, ರಾಜ್ಯದ ಜನತೆ ಆತಂಕದಲ್ಲಿದೆ. ಇದರ ನಡುವೆ ಆಸ್ಪತ್ರೆಗೆ ದಾಖಲಾಗಿ ಆಕ್ಸಿಜನ್ ಸಿಗದೇ ಮೃತಪಡುವರ ಸಂಖ್ಯೆ ಕೂಡ ಹೆಚ್ಚಳವಾಗಿದೆ. ಮೊನ್ನೆಯಷ್ಟೇ ಚಾಮರಾಜನಗರದಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಸಕಾಲಕ್ಕೆ ಆಕ್ಸಿಜನ್ ಸಿಗದೇ 24 ಜನರು ಮೃತಪಟ್ಟಿದ್ದಾರೆ.

ಈ ಹಿನ್ನೆಲೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದು, ಆಕ್ಸಿಜನ್ ಕೊರತೆ ನೀಗಿಸಲು ಮಧ್ಯಪ್ರವೇಶಿಸಲು ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ.

ಪತ್ರದಲ್ಲಿ ಏನಿದೆ..?

''ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ.. ಆಮ್ಲಜನಕ ಕೊರತೆಯಿಂದ ರಾಜ್ಯದಲ್ಲಿ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆ ನಾನು ನಿಮಗೆ ಪತ್ರ ಬರೆಯುತ್ತಿದ್ದೇನೆ. ಕೊರೊನಾ ಬಿಕ್ಕಟ್ಟಿನಿಂದ ರಾಜ್ಯವನ್ನು ಪಾರು ಮಾಡಲು, ಮುಂದೆ ನಡೆಯುವ ದುರಂತವನ್ನು ತಡೆಯಲು ನಿಮ್ಮ ಹಸ್ತಕ್ಷೇಪವನ್ನು ನಾನು ಬಯಸುತ್ತೇನೆ'' ಎಂದು ಪ್ರಧಾನಿ ಮೋದಿ ಬಳಿ ಹೆಚ್ ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.



Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top