Kannada News Now
1.7M Followers ಬೆಂಗಳೂರು : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು 31:03:2022 ರವರೆಗೆ ವಿಸ್ತರಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಫೆ.28 ರವರೆಗೆ ಕಾಲಾವಕಾಶ ನೀಡಲಾಗಿತ್ತು. ಇದೀಗ ಮುಂದುವರೆದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು 31:03:2022 ರವರೆಗೆ ವಿಸ್ತರಿಸಲಾಗಿದೆ.
ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಫೆ.28 ನಿಗಧಿಪಡಿಸಲಾಗಿತ್ತು, ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ ಪೋಷಕರು ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮಾ.31 ರವರೆಗೆ ವಿಸ್ತರಿಸಲಾಗಿದೆ.
ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳ ಹೆಚ್ಚಿನ ಮಾಹಿತಿಗಾಗಿ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಸಂಬಂಧಿಸಿದ ಹಾಗೂ ಸರ್ಕಾರಿ ವಿದ್ಯಾರ್ಥಿವೇತನಕ್ಕೆ ಆದೇಶಗಳ ಬಗ್ಗೆ ಮಾಹಿತಿಗಾಗಿ ಭೇಟಿ ನೀಡಬೇಕಾದ ವೆಬ್‍ಸೈಟ್ ವಿಳಾಸ www.bcwd.karnataka.gov.in/ ಅಥವಾ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ ಹಾಗೂ ಇಮೇಲ್-8050770005/8050770004 bcwd.scholarship@karnataka.gov.in ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್ postmatrichelp@karnataka.gov.in ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
HD Kumaraswamy: ಉಪ್ಪು ಹುಳಿ ಖಾರ ಇಲ್ಲದ, ಯಾರದ್ದೋ ಒತ್ತಡದಿಂದ ಓದಿದ ಬಜೆಟ್ - ಮಾಜಿ ಸಿಎಂ ಕುಮಾರಸ್ವಾಮಿ ಕಟುಟೀಕೆ
Disclaimer
This story is auto-aggregated by a computer program and has not been created or edited by Dailyhunt Publisher: Kannada News Now