Sunday, 22 Nov, 8.02 pm Kannada News Now

ಕರ್ನಾಟಕ
BIGG NEWS : 'ರೋಷನ್ ಬೇಗ್' ಗೆ 14 ದಿನ ನ್ಯಾಯಾಂಗ ಬಂಧನ : ಪರಪ್ಪನ ಅಗ್ರಹಾರ ಜೈಲಿನತ್ತ 'ಮಾಜಿ ಸಚಿವ'

ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೋಷನ್ ಬೇಗ್ ಗೆ 14 ದಿನ ನ್ಯಾಯಾಂಗ ಬಂಧನ ವಿಧಿ ಸಿ ಕೋರ್ಟ್ ಆದೇಶಿಸಿದೆ.

ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವಂತ ಸಿಬಿಐ, ತನ್ನ ತನಿಖೆಯನ್ನು ಚುರುಕುಗೊಳಿಸಿದೆ. ಇಂದು ಬೆಳಿಗ್ಗೆಯಿಂದ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಈ ಹಿನ್ನೆಲೆ ರೋಷನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ಪರಪ್ಪನ ಅಗ್ರಹಾರಕ ಜೈಲಿಗೆ ಕರೆದುಕೊಂಡು ಹೋಗುತ್ತಿದ್ದಾರೆ.

ಎಂಬ ಶಂಕೆಯ ಹಿನ್ನಲೆಯಲ್ಲಿ ವಿಚಾರಣೆ ನಡೆಸುತ್ತಿದೆ. ಈ ಮೂಲಕ ರೋಷನ್ ಬೇಗ್ ಅವರನ್ನು ಸಿಬಿಐ ಡ್ರಿಲ್ ನಡೆಸುತ್ತಿದೆ. ಇದೀಗ ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೋಷನ್ ಬೇಗ್ ಗೆ ರೋಷನ್ ಬೇಗ್ ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ

ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಆರೋಪಿ ಮನ್ಸೂರ್ ಖಾನ್‌ನಿಂದ ಸುಮಾರು 200 ಕೋಟಿ ರೂ. ಗೂ ಹೆಚ್ಚು ಹಣವನ್ನು ರೋಷನ್ ಬೇಗ್ ಪಡೆದಿದ್ದಾರೆ ಎಂಬ ಆರೋಪವಿದೆ. ಜೊತೆಗೆ ಐಷಾರಾಮಿ ಕಾರುಗಳೂ ಸೇರಿದಂತೆ ಇನ್ನಿತರ ದುಬಾರಿ ಬೆಲೆಯ ಉಡುಗೊರೆಗಳನ್ನೂ ರೋಷನ್ ಬೇಗ್ ಪಡೆದಿದ್ದಾರೆ ಎಂಬ ಆರೋಪವಿದೆ.

ಎಚ್ಚರ…. 'ಸೋಶಿಯಲ್ ಮೀಡಿಯಾ'ದಲ್ಲಿ 'ವಿವಾದಿತ ಪೋಸ್ಟ್' ಹಾಕಿದ್ರೆ 5 ವರ್ಷ ಜೈಲು, 10,000 ದಂಡ ಫಿಕ್ಸ್..!



Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top