Dailyhunt Logo
  • Light mode
    Follow system
    Dark mode
    • Play Story
    • App Story
BREAKING : 2028ಕ್ಕೆ ಕರ್ನಾಟಕದಲ್ಲಿ, 2029ಕ್ಕೆ ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ : ಸಿಎಂ ಡಿಕೆ ಶಿವಕುಮಾರ್ ವಿಶ್ವಾಸ!

BREAKING : 2028ಕ್ಕೆ ಕರ್ನಾಟಕದಲ್ಲಿ, 2029ಕ್ಕೆ ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ : ಸಿಎಂ ಡಿಕೆ ಶಿವಕುಮಾರ್ ವಿಶ್ವಾಸ!

Kannada News Now 3 days ago

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವನ್ನು ಗುರಿಯಾಗಿಸಿಕೊಂಡಿರುವ ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಮಾಜಿ ಸಚಿವ ಬಿ.

ನಾಗೇಂದ್ರ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಿದ್ದಾರೆ. ಆದರೆ ವಿಪಕ್ಷ ಬಿಜೆಪಿ ಏನೇ ಮಾಡಿದರೂ ಅವರಿಗೆ ಸಮಾಧಾನವಾಗುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

ಅವರ ಆಡಳಿತಾವಧಿಯಲ್ಲಿ ನಡೆದ ಹಗರಣಗಳ ಸರಮಾಲೆಯೇ ವಿಪರೀತವಾಗಿದೆ" ಎಂದು ತಿರುಗೇಟು ನೀಡಿದರು. ಅಲ್ಲದೆ, "ಕೆಪಿಎಸ್‌ಸಿ ಅಧ್ಯಕ್ಷರನ್ನು ನೇಮಕ ಮಾಡಿದವರು ಯಾರು? ಅವರೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಂಡವರು ಯಾರು?" ಎಂದು ಪ್ರಶ್ನಿಸಿದ ಅವರು, ಈ ಕುರಿತು ಸಚಿವ ಸಂಪುಟ ಸಭೆಯಲ್ಲೂ ಸವಿಸ್ತಾರವಾಗಿ ಚರ್ಚಿಸಲಾಗಿದೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆಯನ್ನು "ನಾಚಿಕೆಗೇಡಿನ ಪಾದಯಾತ್ರೆ" ಎಂದು ಬಣ್ಣಿಸಿದ ಶಿವಕುಮಾರ್, ಇದು ಜನಪರ ಪಾದಯಾತ್ರೆಯಲ್ಲ ಎಂದು ವ್ಯಂಗ್ಯವಾಡಿದರು.

"ಬಿಜೆಪಿಯವರು ತಮ್ಮ ಪಕ್ಷದ ಆಂತರಿಕ ಬಿಕ್ಕಟ್ಟು ಮತ್ತು ಭಿನ್ನಾಭಿಪ್ರಾಯಗಳನ್ನು ಒಗ್ಗೂಡಿಸುವ ಹಾಗೂ ಪಕ್ಷ ಸಂಘಟನೆ ಮಾಡುವ ಉದ್ದೇಶದಿಂದ ಮಾತ್ರ ಈ ಪಾದಯಾತ್ರೆ ಮಾಡುತ್ತಿದ್ದಾರೆ. ಅವರು ಪಾದಯಾತ್ರೆ ಮಾಡಿಕೊಳ್ಳಲಿ, ನಾನು ಸುಮ್ಮನೆ ಕೂರುವುದಿಲ್ಲ. ಸೂಕ್ತ ಸಮಯದಲ್ಲಿ ನಾನೂ ಕೂಡ ನನ್ನದೇ ಆದ ಒಂದು ಯಾತ್ರೆಗೆ ಚಾಲನೆ ನೀಡಲಿದ್ದೇನೆ. ರಾಜಕಾರಣ ಮಾಡುವ ಸಮಯದಲ್ಲಿ ನಾವು ರಾಜಕಾರಣ ಮಾಡಲಿದ್ದೇವೆ" ಎಂದು ಬಿಜೆಪಿಗೆ ಖಡಕ್ ಎಚ್ಚರಿಕೆ ನೀಡಿದರು.

ಬಿಜೆಪಿಯ ಶಾಸಕರು ಮತ್ತು ನಾಯಕರ ವಿರುದ್ಧ ಕಿಡಿಕಾರಿದ ಅವರು, "ಬಿಜೆಪಿಗೆ ಈಗ ಕೊನೆಯ ಕಾಲ ಹತ್ತಿರವಾಗುತ್ತಿದೆ. ರಾಜ್ಯದ ಜನತೆ ನಮ್ಮ ಪರವಾಗಿದ್ದು, 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ನಮ್ಮ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಅಷ್ಟೇ ಅಲ್ಲದೆ, 2029ರ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲೂ ನಮ್ಮದೇ ಸರ್ಕಾರ ರಚನೆಯಾಗಲಿದೆ. ಜನರೇ ನಮಗೆ ಅಧಿಕಾರ ನೀಡುತ್ತಿದ್ದಾರೆ ಹೊರತು ಬಿಜೆಪಿಯವರಿಂದ ಅಲ್ಲ" ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

Dailyhunt
Disclaimer: This content has not been generated, created or edited by Dailyhunt. Publisher: Kannada News Now