ನವದೆಹಲಿ : ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನ ಅಧಿವೇಶನಕ್ಕೂ ಮುನ್ನ ದೇಹದ ಸಂಪೂರ್ಣ ತಪಾಸಣೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು, ಚೇತರಿಕೆಯ ನಂತರ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ .
ಅಮಿತ್ ಶಾ ಅವರು ಉಸಿರಾಟದ ಸಮಸ್ಯೆಯಿಂದ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು ಕೊರೊನಾ ವೈರಸ್ ಸೋಂಕಿಗೆ ಆರಂಭದಲ್ಲಿ ಒಳಗಾಗಿದ್ದ 55 ವರ್ಷದ ಅಮಿತ್ ಶಾ ಚಿಕಿತ್ಸೆ ನಂತರ ಪದೇಪದೆ ಆಸ್ಪತ್ರೆಗೆ ದಾಖಲಾಗುತ್ತಿದ್ದು, ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.

