Dailyhunt Logo
  • Light mode
    Follow system
    Dark mode
    • Play Story
    • App Story
BREAKING : ಬರೋಬ್ಬರಿ 9 ತಿಂಗಳ ಬಳಿಕ 'RSS' ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಇಬ್ಬರು ಶಿಕ್ಷಕರು ಸಸ್ಪೆಂಡ್!

BREAKING : ಬರೋಬ್ಬರಿ 9 ತಿಂಗಳ ಬಳಿಕ 'RSS' ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಇಬ್ಬರು ಶಿಕ್ಷಕರು ಸಸ್ಪೆಂಡ್!

Kannada News Now 1 week ago

ಯಾದಗಿರಿ: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಪಥಸಂಚಲನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲೆಗಳ ಶಿಕ್ಷಕರನ್ನು ಸೇವೆಯಿಂದ ಅಮಾನತುಗೊಳಿಸಿ ಯಾದಗಿರಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಡಿಡಿಪಿಐ) ಆದೇಶ ಹೊರಡಿಸಿದ್ದಾರೆ.

ಘಟನೆ ನಡೆದು ಸುಮಾರು 9 ತಿಂಗಳ ನಂತರ ಈ ಶಿಸ್ತುಕ್ರಮ ಕೈಗೊಳ್ಳಲಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಅಮಾನತುಗೊಂಡ ಶಿಕ್ಷಕರನ್ನು ಹುಣಸಗಿ ತಾಲೂಕಿನ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕ ಗುರುರಾಜ ಜೋಶಿ ಹಾಗೂ ಕುಪ್ಪಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಅಣ್ಣ ಸಾಹೇಬ್ ದೇಶಮುಖ್ ಎಂದು ಗುರುತಿಸಲಾಗಿದೆ. ಕಳೆದ ವರ್ಷದ ನವೆಂಬರ್ ತಿಂಗಳಿನಲ್ಲಿ ನೆರೆಯ ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ನಡೆದಿದ್ದ ಆರ್‌ಎಸ್‌ಎಸ್‌ನ ಪಥಸಂಚಲನದಲ್ಲಿ ಈ ಇಬ್ಬರು ಶಿಕ್ಷಕರು ಭಾಗಿಯಾಗಿದ್ದರು ಎನ್ನಲಾಗಿದೆ.

ಸರ್ಕಾರಿ ನೌಕರರ ನಿಯಮಾವಳಿಗಳನ್ನು ಮೀರಿ ರಾಜಕೀಯ ಅಥವಾ ಸಂಘ-ಸಂಸ್ಥೆಗಳ ಇಂತಹ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ನಡೆಸಿ, ಪ್ರಸ್ತುತ ಇಬ್ಬರ ವಿರುದ್ಧವೂ ಅಮಾನತು ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಯಾದಗಿರಿ ಡಿಡಿಪಿಐ ಅಧಿಕೃತ ಆದೇಶವನ್ನು ಹೊರಡಿಸಿದ್ದು, ಶಿಕ್ಷಕರ ಈ ನಡೆ ಸರ್ಕಾರಿ ಸೇವಾ ನಿಯಮಗಳ ಉಲ್ಲಂಘನೆ ಎಂದು ಪರಿಗಣಿಸಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannada News Now