Wednesday, 16 Sep, 10.06 am Kannada News Now

ಹೋಮ್
BREAKING : ಭಾರತದಲ್ಲಿ ಅರ್ಧ ಕೋಟಿ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ!

ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, 24 ಗಂಟೆಯಲ್ಲಿ ದೇಶದಲ್ಲಿ 90,123 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಅರ್ಧ ಕೋಟಿ ಗಡಿ ದಾಟಿದೆ.

ಕೇಂದ್ರ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಭಾರತದಲ್ಲಿ ಕಳೆದ ಒಂದು ದಿನದಲ್ಲಿ 1,290 ಮಂದಿ ಮೃತಪಟ್ಟಿದ್ದು, ಈವರೆಗೆ 82,066 ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ.

ದೇಶದಲ್ಲಿ ಈವರೆಗೆ 50,20,360 ಮಂದಿಗೆ ಸೋಂಕು ತಗುಲಿದ್ದು, ಈ ಪೈಕಿ 39,42,361 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top