Thursday, 03 Dec, 10.14 am Kannada News Now

ಕರ್ನಾಟಕ
BREAKING : ಭಾರತದಲ್ಲಿ ಒಂದೇ ದಿನ 35,551 ಮಂದಿಗೆ ಕೊರೊನಾ ಸೋಂಕು

ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಸೊಂಕಿನ ಅಬ್ಬರ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 35,551 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 95,34,965 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 526 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,38,648 ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ ದೇಶದಲ್ಲಿ ಸದ್ಯ 89,73, 373 ಮಂದಿ ಗುಣಮುಖರಾಗಿದ್ದು, ಸದ್ಯ 4,22,943 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.



Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top