Monday, 25 Jan, 10.29 am Kannada News Now

ಭಾರತ
BREAKING : ಭಾರತದಲ್ಲಿ ಒಂದೇ ದಿನದಲ್ಲಿ 13,203 ಕೊರೋನಾ ಪ್ರಕರಣ ದಾಖಲು : 131 ಜನ ಸಾವು

ನವದೆಹಲಿ: ಭಾರತದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 13,203 ​​ ಪ್ರಕರಣಗಳು ಪತ್ತೆಯಾಗಿದ್ದು, 131 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಸದ್ಯ ದೇಶದಲ್ಲಿ ಸೋಂಕಿತರ ಸಂಖ್ಯೆ 1,06,67,736 ಹಾಗೂ ಮೃತರ ಸಂಖ್ಯೆ 1,53,470ಕ್ಕೆ ಏರಿಕೆಯಾಗಿದೆ. ಆದರೆ, ಮರಣ ಪ್ರಮಾಣ ಶೇ.1.44ಕ್ಕೆ ಇಳಿಕೆಯಾಗಿದೆ.

ಇಲ್ಲಿವರೆಗೆ 1,03,30,084 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಿದ್ದಾರೆ. ಉಳಿದಂತೆ 1,84,182 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಶಾಕಿಂಗ್ : ಅಪ್ರಾಪ್ತ ಬಾಲಕಿ ಸೇರಿ ಒಂದೇ ಕುಟುಂಬದ ನಾಲ್ವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ

ಜನವರಿ​ 25ರ ವರೆಗೆ 19,17,66,871 ಜನರಿಗೆ ಕೋವಿಡ್​ ಟೆಸ್ಟ್​ ಮಾಡಲಾಗಿದ್ದು, ನಿನ್ನೆ ಒಂದೇ ದಿನ 7,81,752 ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.

ಇನ್ನು 16,15,504 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್​ ಲಸಿಕೆ ನೀಡಲಾಗಿದೆ.

ಉಚಿತ, ತಾಜಾ ಸುದ್ದಿಗಾಗಿ ನಮ್ಮ WhatAapp ಗ್ರೂಪ್‌ ಸೇರಿಕೊಳ್ಳಿ https://bit.ly/3sQOxW9Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top