Dailyhunt Logo
  • Light mode
    Follow system
    Dark mode
    • Play Story
    • App Story
BREAKING: ಭಾರೀ ಮಳೆ ಹಿನ್ನಲೆ: ನಾಳೆ ಸಾಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಆದೇಶ

BREAKING: ಭಾರೀ ಮಳೆ ಹಿನ್ನಲೆ: ನಾಳೆ ಸಾಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಆದೇಶ

Kannada News Now 5 days ago

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಮತ್ತು ಮುಂದಿನ ದಿನಗಳಲ್ಲೂ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ, ಮುಂಜಾಗ್ರತಾ ಕ್ರಮವಾಗಿ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ (ಬುಧವಾರ, ಜುಲೈ 8) ಒಂದು ದಿನದ ರಜೆ ಘೋಷಿಸಲಾಗಿದೆ .

ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಟ್ಟುನಿಟ್ಟಿನ ನಿರ್ದೇಶನದ ಮೇರೆಗೆ ಸಾಗರ ತಹಶೀಲ್ದಾರ್ ಡಾ.ಪ್ರತಿಭಾ ಅವರು ಈ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಯಾವೆಲ್ಲಾ ಶಾಲಾ-ಕಾಲೇಜುಗಳಿ ರಜೆ ಅನ್ವಯ?

ಸಾಗರ ತಾಲ್ಲೂಕಿನಾದ್ಯಂತ ಇರುವ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಒಡೆತನದ ಸಂಸ್ಥೆಗಳಿಗೆ ರಜೆ ಅನ್ವಯಿಸಲಿದ್ದು, ವಿವರ ಹೀಗಿದೆ:

  • ಎಲ್ಲಾ ಅಂಗನವಾಡಿ ಕೇಂದ್ರಗಳು

  • ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು

  • ಎಲ್ಲಾ ಪದವಿಪೂರ್ವ (ಪಿಯುಸಿ) ಕಾಲೇಜುಗಳು

  • ಎಲ್ಲಾ ಡಿಪ್ಲೊಮಾ ಕಾಲೇಜುಗಳು

ಮುಂದಿನ ರಜಾದಿನಗಳಲ್ಲಿ ತರಗತಿ ಹೊಂದಾಣಿಕೆಗೆ ಸೂಚನೆ

ಮಳೆಯ ಮುಂಜಾಗ್ರತಾ ಕ್ರಮವಾಗಿ ಜುಲೈ 8 ರಂದು ಒಂದು ದಿನದ ರಜೆ ನೀಡಲಾಗಿದ್ದು, ಈ ದಿನದಂದು ನಡೆಯಬೇಕಾಗಿದ್ದ ಪಠ್ಯ ಚಟುವಟಿಕೆ ಹಾಗೂ ಪಾಠ ಪ್ರವಚನಗಳ ನಷ್ಟವನ್ನು ಸರಿದೂಗಿಸಲು ಮುಂದಿನ ರಜಾ ದಿನಗಳಲ್ಲಿ ವಿಶೇಷ ತರಗತಿಗಳನ್ನು ನಡೆಸಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಶಿಕ್ಷಣ ಸಂಸ್ಥೆಗಳಿಗೆ ತಹಶೀಲ್ದಾರ್ ಡಾ.ಪ್ರತಿಭಾ ಸೂಚಿಸಿದ್ದಾರೆ.

ಈ ಆದೇಶದ ಸೂಕ್ತ ಅನುಷ್ಠಾನಕ್ಕಾಗಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು (BEO), ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು (CDPO) ಹಾಗೂ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರಿಗೆ ಅಗತ್ಯ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು.

Dailyhunt
Disclaimer: This content has not been generated, created or edited by Dailyhunt. Publisher: Kannada News Now