Dailyhunt Logo
  • Light mode
    Follow system
    Dark mode
    • Play Story
    • App Story
BREAKING : ಬಿ.ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್

BREAKING : ಬಿ.ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್

Kannada News Now 2 weeks ago

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲರು ಇಂದು ಅಧಿಕೃತವಾಗಿ ಅಂಗೀಕರಿಸಿದ್ದಾರೆ. ಈ ಹಗರಣದ ತನಿಖೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ರಾಜೀನಾಮೆ ಅಂಗೀಕಾರವಾಗಿರುವ ಕುರಿತು ರಾಜಭವನದಿಂದ ಅಧಿಕೃತ ಮಾಹಿತಿಯನ್ನು ರವಾನಿಸಲಾಗಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ರಾಜಪಾಲರ ಕಾರ್ಯಾಲಯದಿಂದ ಪತ್ರ ರವಾನಿಸಲಾಗಿದ್ದು, ರಾಜೀನಾಮೆ ಪ್ರಕ್ರಿಯೆ ಪೂರ್ಣಗೊಂಡಿರುವುದನ್ನು ಸ್ಪಷ್ಟಪಡಿಸಲಾಗಿದೆ.

ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಬಿ. ನಾಗೇಂದ್ರ ಅವರು ಎರಡೆರಡು ಬಾರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತಾಗಿತ್ತು. ಇದೀಗ ಅವರ ರಾಜೀನಾಮೆಯನ್ನು ರಾಜ್ಯಪಾಲರು ಸಮ್ಮತಿಸುವುದರೊಂದಿಗೆ ಈ ಪ್ರಕರಣದಲ್ಲಿ ರಾಜಕೀಯ ಹಾಗೂ ಕಾನೂನು ಹೋರಾಟ ಮತ್ತಷ್ಟು ಕಾವು ಪಡೆದುಕೊಂಡಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannada News Now