ಚಾಮರಾಜನಗರ : ಚಾಮರಾಜನಗರ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಒಂದೇ ವಾರದಲ್ಲಿ 5ನೇ ಬಾರಿಗೆ ಇಮೇಲ್ ಬೆದರಿಕೆ ಸಂದೇಶ ಬಂದಿದೆ ಡಿಎಂಕೆ ನಿಷ್ಠಾವಂತ ಕಾರ್ಯಕರ್ತನಾಗಿದ್ದಕ್ಕೆ ಕಿರುಕುಳ ಎಂದು ಸಂದೇಶ ಬಂದಿದ್ದು ತಮಿಳುನಾಡಿನ ರಾಜಕೀಯ ವಿಚಾರದ ಮೇಲೆ ಪದೇ ಪದೇ ಈ ರೀತಿ ಬೆದರಿಕೆ ಸಂದೇಶಗಳು ಬರುತ್ತಿವೆ.
ಮಾಹಿತಿ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರಿಯದಳ ಹಾಗೂ ಶ್ವಾನ ದಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ
ಅಲ್ಲದೇ ಯಾದಗಿರಿಯ ನೂತನ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣಕ್ಕೆ ಗುರುವಾರ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿದ್ದು, ಪೊಲೀಸರು ತೀವ್ರ ತಪಾಸಣೆ ನಡೆಸಿದರು.
ಬಾಂಬ್ ಬೆದರಿಕೆ ಸಂದೇಶದಿಂದಾಗಿ ಕೋರ್ಟ್ ಕಲಾಪಗಳಲ್ಲಿ ವ್ಯತ್ಯಯವಾಯಿತು. ಗೊಂದಲದ ವಾತಾವರಣವೂ ನಿರ್ಮಾಣವಾಯಿತು. ಸಾರ್ವಜನಿಕರು, ವಕೀಲರು, ಸಿಬ್ಬಂದಿಯನ್ನು ಪೊಲೀಸರು ಹೊರಗೆ ಕಳುಹಿಸಿದರು. ಬಾಂಬ್ ನಿಷ್ಕ್ರಿಯ ದಳ, ಶ್ವಾನದಳದ ಸಿಬ್ಬಂದಿ ನ್ಯಾಯಾಲಯದ ಸಭಾಂಗಣ, ಕೊಠಡಿ, ವಿವಿಧ ಕೊಠಡಿಗಳು ಸೇರಿ ಇಡೀ ನ್ಯಾಯಾಲಯ ಹಾಗೂ ಆವರಣದಲ್ಲಿ ತಪಾಸಣೆ ನಡೆಸಿದರು.

