Dailyhunt Logo
  • Light mode
    Follow system
    Dark mode
    • Play Story
    • App Story
BREAKING: ಚಳಿಗಾಲದ ಕರ್ನಾಟಕ ವಿಧಾನಮಂಡಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್

BREAKING: ಚಳಿಗಾಲದ ಕರ್ನಾಟಕ ವಿಧಾನಮಂಡಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್

Kannada News Now 6 mins ago

ಬೆಂಗಳೂರು: ಕರ್ನಾಟಕ ವಿಧಾನ ಮಂಡಲದ ಉಭಯ ಸದನಗಳ ಬಹುನಿರೀಕ್ಷಿತ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಡಿಸೆಂಬರ್ 7, 2026 ರಿಂದ ನಡೆಸಲು ಸಂಭಾವನೀಯವಾಗಿ ಗೊತ್ತುಪಡಿಸಲಾಗಿದೆ. ಈ ಕುರಿತು ಅಗತ್ಯ ಪೂರ್ವಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.

ಶಾಲಿನಿ ರಜನೀಶ್ ಅವರು ಸೂಚಿಸಿದ್ದಾರೆ.

ಕಳೆದ ಅಕ್ಟೋಬರ್ 15, 2026 ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಿರ್ಧಾರದಂತೆ, ಡಿಸೆಂಬರ್ 7 ರಿಂದ ಬೆಳಗಾವಿಯಲ್ಲಿ 10 ದಿನಗಳ ಕಾಲ ಉಭಯ ಸದನಗಳ ಚಳಿಗಾಲದ ಅಧಿವೇಶನವನ್ನು ಸಮಾವೇಶಗೊಳಿಸಲು ತೀರ್ಮಾನಿಸಲಾಗಿದೆ.

ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ವಿಧಾನ ಪರಿಷತ್ತು ಸಚಿವಾಲಯದ ಕಾರ್ಯದರ್ಶಿ (ಪ್ರ) ಶ್ರೀಮತಿ ಜ್ಯೋತಿ ಅವರಿಗೆ ದಿನಾಂಕ 27.10.2026 ರಂದು ಅಧಿಕೃತ ಪತ್ರ ಬರೆದಿದ್ದು, ಅಧಿವೇಶನ ಸುಸೂತ್ರವಾಗಿ ನಡೆಯಲು ಬೇಕಾದ ಅಗತ್ಯ ಪೂರ್ವ ಸಿದ್ಧತೆಗಳನ್ನು ತಕ್ಷಣದಿಂದಲೇ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Kannada News Now