ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಭೀಕರವಾದ ಕೊಲೆ ನಡೆದಿದ್ದು ಹಾಡಹಗಲೇ ಮಾರಕಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹುಬ್ಬಳ್ಳಿಯ ಲಿಂಗರಾಜನಗರದ ಸಿದ್ದೇಶ್ವರ ಪಾರ್ಕಲ್ಲಿ ಈ ಒಂದು ಕೊಲೆ ನಡೆದಿದೆ.
ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮೇಲೆ ಇಬ್ಬರು ದಾಳಿ ಮಾಡಿದ್ದಾರೆ.
ಲಾಂಗು ಮತ್ತು ಮಚ್ಚಿನಿಂದ ಕೊಚ್ಚಿ ಕೊಂದು ಇಬ್ಬರು ಪರಾರಿಯಾಗಿದ್ದಾರೆ. ಹತ್ಯೆ ಆದವನ ಗುರುತನ್ನು ಇದೀಗ ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ. ಘಟನ ಸ್ಥಳಕ್ಕೆ ಡಿಸಿಪಿ ಶೃತಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

