Dailyhunt Logo
  • Light mode
    Follow system
    Dark mode
    • Play Story
    • App Story

BREAKING : ಕೆಲವೇ ಕ್ಷಣಗಳಲ್ಲಿ ಐತಿಹಾಸಿಕ ಹಾಸನಾಂಬೆ ದೇಗುಲದ ಬಾಗಿಲು ಓಪನ್

Kannada News Now 22 hrs ago

ಹಾಸನ : ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ಕರುಣಿಸುವ ಹಾಸನದ ಅಧಿದೇವತೆ, ಶಕ್ತಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದಿನಿಂದ (ಅ.29) - ನ.11ರವರೆಗೆ ನಡೆಯಲಿರುವ ಹಾಸನಾಂಬ ಹಾಗೂ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದಾದ್ಯಂತ ಸಡಗರದ ವಾತಾವರಣ ನಿರ್ಮಾಣವಾಗಿದೆ.

ಆಶ್ವಯುಜ ಮಾಸದ ಹುಣ್ಣಿಮೆಯ ನಂತರ ಬರುವ ಗುರುವಾರದಂದು ಅಂದರೆ ಇಂದು ಬಾಗಿಲು ತೆರೆಯಲಾಗುತ್ತಿದೆ. ಕೆಲವೇ ಕ್ಷಣಗಳಲ್ಲಿ ಶಾಸ್ತ್ರೋಕ್ತ ವಿಧಿವಿಧಾನಗಳೊಂದಿಗೆ ಹಾಸನಾಂಬ ದೇವಾಲಯದ ಗರ್ಭಗುಡಿ ಬಾಗಿಲು ತೆರೆಯಲಾಗುತ್ತೆ.

ಅರಸು ವಂಶಸ್ಥ ನಂಜರಾಜೇ ಅರಸ್ ಅವರು ಗೊನೆಯುಳ್ಳ ಬಾಳೆಕಂಬ ಕಡಿದ ಬಳಿಕ ಗರ್ಭಗುಡಿಯ ಬಾಗಿಲು ತೆರೆಯುವ ಸಂಪ್ರದಾಯ ನಡೆಯಲಿದೆ. ಈ ಸಂದರ್ಭದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ, ಮುಜರಾಯಿ ಖಾತೆ ಸಚಿವ ಬಸವಂತಪ್ಪ, ಶಾಸಕ ಹೆಚ್.ಪಿ. ಸ್ವರೂಪ್ ಪ್ರಕಾಶ್, ಸಂಸದ ಶ್ರೇಯಸ್ ಪಟೇಲ್, ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ ಹಾಗೂ ಆಡಳಿತಾಧಿಕಾರಿ ಜಗದೀಶ್ ಗಂಗಣ್ಣನವರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಮೂರು ಪಾಳಿಗಳಲ್ಲಿ 2,000ಕ್ಕೂ ಅಧಿಕ ಪೊಲೀಸರು ಹಾಗೂ ಹೋಂಗಾರ್ಡ್‌ಗಳನ್ನು ನಿಯೋಜಿಸಲಾಗಿದೆ. ಧರ್ಮದರ್ಶನದ ಸಾಲಿನಲ್ಲಿ ನೂಕುನುಗ್ಗಲು ಉಂಟಾಗದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ದೇವಾಲಯದ ಸುತ್ತಮುತ್ತ ಸಿಸಿಟಿವಿ ಕ್ಯಾಮರಾಗಳ ಮೂಲಕ ನಿಗಾ ವಹಿಸಲಾಗುತ್ತಿದೆ. ಮಳೆಯಿಂದ ಭಕ್ತರಿಗೆ ತೊಂದರೆಯಾಗದಂತೆ ಟೆಂಟ್‌ಗಳನ್ನು ನಿರ್ಮಿಸಲಾಗಿದೆ. ಭಕ್ತರಿಗೆ ಉಚಿತ ದೊನ್ನೆ ಪ್ರಸಾದ ವಿತರಣೆಯ ವ್ಯವಸ್ಥೆಯನ್ನೂ ಜಿಲ್ಲಾಡಳಿತ ಮಾಡಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannada News Now