ಮಂಡ್ಯ: ಚಲಿಸುತ್ತಿದ್ದ ರೈಲಿಗೆ ಸಿಲುಕಿ 18 ವರ್ಷದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಚಿಂದಗಿರಿಕೊಪ್ಪಲು ಗ್ರಾಮದ ಬಳಿ ನಡೆದಿದೆ.
ಮೃತ ಯುವತಿಯನ್ನು ಚಿಂದಗಿರಿಕೊಪ್ಪಲು ಗ್ರಾಮದ ನಿವಾಸಿ ಲಿಖಿತಾ (18) ಎಂದು ಗುರುತಿಸಲಾಗಿದೆ.
ಈಕೆ ಚಿನಕುರುಳಿಯ ಎಸ್‌ಟಿಜಿ (STG) ಕಾಲೇಜಿನಲ್ಲಿ ಪ್ರಥಮ/ಪದವಿ ಬಿಸಿಎ (BCA) ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.
ಯುವತಿ ಯಾವ ಕಾರಣಕ್ಕಾಗಿ ಇಂತಹ ಕಠಿಣ ನಿರ್ಧಾರ ಕೈಗೊಂಡಿದ್ದಾಳೆ ಎಂಬುದಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯ ವಿಷಯ ತಿಳಿಯುತ್ತಿದ್ದಂತೆ ರೈಲ್ವೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಈ ಘಟನೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ವರದಿ: ಗಿರೀಶ್ ರಾಜ್, ಮಂಡ್ಯ

