ಬೆಂಗಳೂರು : ಮಾರಕ ಕೊರೊನಾ ಭೀತಿ ರಾಜ್ಯದೆಲ್ಲೆಡೆ ಮನೆಮಾಡಿದ್ದು, ತಲ್ಲಣ ಸೃಷ್ಟಿಸಿದೆ. ಹಲವು ಸೇವೆಗಳು ಸ್ಥಗಿತಗೊಂಡಿದ್ದು, 1 ರಿಂದ 6 ನೇ ತರಗತಿಗಳ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಏತನ್ಮಧ್ಯೆ, ಎಸ್.ಎಸ್.ಎಲ್.ಸಿ, ಪಿಯುಸಿ ಪರೀಕ್ಷೆಗಳು ನಿಗದಿತ ವೇಳಾಪಟ್ಟಿಯಂತೆ ನಡೆಯಲಿವೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಎಸ್ ಎಸ್ ಎಲ್ ಸಿ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಇಲ್ಲ. ಪಿಯುಸಿ ಪರೀಕ್ಷೆಗಳು ಸಹ ಟೈಮ್ ಟೇಬಲ್ ನಂತೆಯೇ ನಡೆಯಲಿವೆ ಎಂದು ಸ್ಪಷ್ಟಪಡಿಸಿದ್ದಾರೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಈಗಾಗಲೇ ಹಲವು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಇದರೊಂದಿಗೆ ಶಾಲಾ-ಕಾಲೇಜಿಗೂ ರಜೆ ಘೋಷಿಸಲಾಗಿದೆ.

