Dailyhunt Logo
  • Light mode
    Follow system
    Dark mode
    • Play Story
    • App Story
BREAKING: ಸಿಎಂ ಡಿ.ಕೆ.ಶಿವಕುಮಾರ್ ಆರ್ಥಿಕ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ ನೇಮಕ!

BREAKING: ಸಿಎಂ ಡಿ.ಕೆ.ಶಿವಕುಮಾರ್ ಆರ್ಥಿಕ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ ನೇಮಕ!

Kannada News Now 2 weeks ago

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಪ್ರಮುಖ ಪ್ರಕ್ರಿಯೆಗಳು ಆರಂಭವಾಗಿವೆ. ಇದರ ಮೊದಲ ಭಾಗವಾಗಿ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿ (Financial Adviser to Chief Minister) ರಾಜ್ಯದ ಹಿರಿಯ ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ.

ಅತೀಕ್ (Sri. Atheeq L K) ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಈ ನೇಮಕಾತಿಯು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ತಿಳಿಸಿದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ದರ್ಜೆಯ ಸ್ಥಾನಮಾನ

ಆಡಳಿತದಲ್ಲಿ ಅಪಾರ ಅನುಭವ ಹೊಂದಿರುವ ಎಲ್.ಕೆ. ಅತೀಕ್ ಅವರಿಗೆ ಈ ಹೊಸ ಜವಾಬ್ದಾರಿಯಲ್ಲಿ ಅತ್ಯುನ್ನತ ಸ್ಥಾನಮಾನ ನೀಡಲಾಗಿದೆ. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರ ಹುದ್ದೆಯಲ್ಲಿ ಇವರು ಪಡೆಯುವ ವೇತನ ಮತ್ತು ಇತರೆ ಭತ್ಯೆಗಳು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ (Chief Secretary to Government) ಹುದ್ದೆಗೆ ಸಮಾನವಾಗಿರಲಿದೆ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಬೆಂಗಳೂರು ಬಿಸಿನೆಸ್ ಕಾರಿಡಾರ್ ಅಧ್ಯಕ್ಷರಾಗಿಯೂ ಮುಂದುವರಿಕೆ

ಹೊಸ ಜವಾಬ್ದಾರಿಯ ಜೊತೆಗೆ, ಎಲ್.ಕೆ. ಅತೀಕ್ ಅವರು ಪ್ರಸ್ತುತ ವಹಿಸಿಕೊಂಡಿರುವ 'ಬೆಂಗಳೂರು ಬಿಸಿನೆಸ್ ಕಾರಿಡಾರ್' (Bengaluru Business Corridor) ನ ಅಧ್ಯಕ್ಷ (Chairman) ಹುದ್ದೆಯಲ್ಲೇ ಮುಂದಿನ ಆದೇಶದವರೆಗೆ ಮುಂದುವರಿಯಲಿದ್ದಾರೆ.

ರಾಜ್ಯದ ಆರ್ಥಿಕ ಶಿಸ್ತು, ನೂತನ ಯೋಜನೆಗಳ ಅನುಷ್ಠಾನ ಹಾಗೂ ಬಜೆಟ್ ನಿರ್ವಹಣೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಎಲ್.ಕೆ. ಅತೀಕ್ ಅವರ ಸುದೀರ್ಘ ಆಡಳಿತಾತ್ಮಕ ಅನುಭವವು ಪ್ರಮುಖ ಮಾರ್ಗದರ್ಶಿಯಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannada News Now