Friday, 23 Apr, 11.23 am Kannada News Now

ಕರ್ನಾಟಕ
ಚುನಾವಣಾ ಪ್ರಚಾರದಲ್ಲಿ ಸಚಿವ ಶ್ರೀರಾಮುಲು ಕೋವಿಡ್ ರೂಲ್ಸ್ ಬ್ರೇಕ್ : ಮಾಸ್ಕ್, ದೈಹಿಕ ಅಂತರ ಮರೆತ ಜನರು!

ಬಳ್ಳಾರಿ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕೊರೊನಾ ನಿಯಂತ್ರಣಕ್ಕೆ ಸಾಕಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಆದರೆ ಸಚಿವ ಶ್ರೀರಾಮುಲು ಅವರು ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಾರೆ.

ಬಳ್ಳಾರಿ ಮಹಾನಗರ ಪಾಲಿಕೆಯ ಚುನಾವಣೆಯ ಪ್ರಚಾರದ ವೇಳೆ ಸಚಿವ ಶ್ರೀರಾಮುಲು ಅವರು ಮಾಸ್ಕ್ ಧರಿಸದೇ, ದೈಹಿಕ ಅಂತರ ಕಾಪಾಡದೇ ಕೋವಿಡ್ ರೂಲ್ಸ್ ಬ್ರೇಕ್ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಬಳ್ಳಾರಿ ಮಹಾನಗರ ಪಾಲಿಕೆಯ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಸಚಿವ ಶ್ರೀರಾಮುಲು ಅವರು ಶ್ರೀರಾಮಪುರದಲ್ಲಿ ಇಂದು ಪ್ರಚಾರ ನಡೆಸಿದ್ದಾರೆ. ಸಚಿವರ ಪ್ರಚಾರ ಕಾರ್ಯಕ್ರಮದಲ್ಲಿ ನೂರಾರು ಜನರು ದೈಹಿಕ ಅಂತರ ಕಾಪಾಡದೇ, ಮಾಸ್ಕ್ ಹಾಕಿಕೊಳ್ಳದೇ ನಿರ್ಲಕ್ಷ್ಯ ಮಾಡಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಚುನಾವಣೆಗೆ ಸಂಬಂಧಿಸಿದಂತೆ ಕೆಲವು ನಿರ್ಬಂಧಗಳನ್ನು ಹೇರಿತ್ತು. 5 ಕ್ಕಿಂತ ಹೆಚ್ಚು ಜನ ಪ್ರಚಾರದಲ್ಲಿ ಭಾಗಿಯಾಗುವಂತಿಲ್ಲ ಎಂದು ಹೇಳಿದೆ. ಆದರೆ ಸಚಿವ ಶ್ರೀರಾಮುಲು ಪ್ರಚಾರದಲ್ಲಿ ನೂರಾರು ಜನರು ಭಾಗವಹಿಸಿದ್ದಾರೆ.





Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top