ಭಾರತ
ದೆಹಲಿ ಟ್ರ್ಯಾಕ್ಟರ್ ರ್ಯಾಲಿ ಹಿಂಸಾಚಾರ ಪ್ರಕರಣ: 20 ರೈತ ಮುಖಂಡರಿಗೆ ʼಪೊಲೀಸ್ ನೋಟಿಸ್ʼ

ನವದೆಹಲಿ: ಗಣರಾಜ್ಯೋತ್ಸವದಂದು ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 20 ರೈತ ಮುಖಂಡರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಟ್ರ್ಯಾಕ್ಟರ್ ರ್ಯಾಲಿಗೆ ಸಂಬಂಧಿಸಿದಂತೆ ಪೊಲೀಸರೊಂದಿಗೆ ಮಾಡಿಕೊಂಡಿದ್ದ ಒಪ್ಪಂದ ಉಲ್ಲಂಘಿಸಿದ್ದಕ್ಕಾಗಿ ಯೋಗೇಂದ್ರ ಯಾದವ್, ಬಲ್ದೇವ್ ಸಿಂಗ್ ಸಿರ್ಸಾ, ಬಲ್ಬೀರ್ S. ರಾಜೇವಾಲ್ ಸೇರಿ 20 ರೈತ ಮುಖಂಡರಿಗೆ ನೋಟಿಸ್ ನೀಡಲಾಗಿದೆ. ಇನ್ನು ಈ ನೋಟೀಸ್ʼಗೆ ಮೂರು ದಿನಗಳೊಳಗಾಗಿ ಉತ್ತರಿಸುವಂತೆ ಸೂಚಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
'ದ್ವಿತೀಯ ದರ್ಜೆ ಸಹಾಯಕ(SDA)' ಪರೀಕ್ಷೆಯ 'ಉಚಿತ ತರಬೇತಿ'ಗಾಗಿ ಅರ್ಜಿ ಆಹ್ವಾನ
ಈ ಹಿಂಸಾಚಾರದಲ್ಲಿ ರೈತ ಮುಖಂಡರು ಭಾಗಿಯಾಗಿದ್ದಾರೆ ಎಂದು ದೆಹಲಿ ಪೊಲೀಸ್ ಆಯುಕ್ತ ಎಸ್.ಎನ್.ಶ್ರೀವಾಸ್ತವ್ ಅವರು ಆರೋಪಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದ್ದು, ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ನಡುವೆ ರಾಷ್ಟ್ರ ರಾಜಧಾನಿಯಲ್ಲಿ ಗಣರಾಜ್ಯೋತ್ಸವದ ವೇಳೆ ನಡೆದ ಹಿಂಸಾಚಾರದಲ್ಲಿ ಗಾಯಗೊಂಡ ಪೊಲೀಸ್ ಮತ್ತು ಭದ್ರತಾ ಸಿಬ್ಬಂದಿಗಳನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಲಿದ್ದಾರೆ ಎಂದು ವರದಿಯಾಗಿದೆ. ಅದ್ರಂತೆ, ಇಂದು ಮಧ್ಯಾಹ್ನ ಗಾಯಾಳುಗಳು ದಾಖಲಾದ ಸಿವಿಲ್ ಲೈನ್ಸ್ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ ಎನ್ನಲಾಗ್ತಿದೆ.
ICC `ODI' RANKING : ವಿರಾಟ್ ಕೊಹ್ಲಿ ನಂ.1, ರೋಹಿತ್ ಶರ್ಮಾ ನಂ.2