Thursday, 28 Jan, 10.39 am Kannada News Now

ಭಾರತ
ದೇಶದ ಒಟ್ಟು ಕೊರೋನಾ ಸೋಂಕಿತರಲ್ಲಿ ಮಹಾರಾಷ್ಟ್ರ, ಕೇರಳದಲ್ಲೇ ಶೇ.70ರಷ್ಟು ಪ್ರಕರಣಗಳು ದಾಖಲು

ನವದೆಹಲಿ: ದೇಶದಲ್ಲಿರುವ ಒಟ್ಟಾರೆ ಕೊರೋನಾ ಸೋಂಕಿತರ ಪೈಕಿ ಮಹಾರಾಷ್ಟ್ರ, ಕೇರಳ ಈ ಎರಡು ರಾಜ್ಯಗಳಲ್ಲೇ ಶೇ.70ರಷ್ಟು ಸೋಂಕಿತರಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 11,666 ಹೊಸ ಕೊರೋನಾ ಪ್ರಕರಣ ದಾಖಲಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1,07,01,193ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಒಂದೇ ದಿನ 123 ಮಂದಿ ಸೋಂಕಿನಿಂದಾಗಿ ಸಾವಿಗೀಡಾಗಿದ್ದಾರೆ. ಮೃತರ ಸಂಖ್ಯೆ 1,53,847ಕ್ಕೆ ಹೆಚ್ಚಳವಾಗಿದೆ.

BREAKING : ದೇಶದಲ್ಲಿ ಒಂದೇ ದಿನ 11,666 ಕೊರೋನಾ ಪ್ರಕರಣ ದಾಖಲು : ಸಕ್ರಿಯ ಪ್ರಕರಣಗಳ ಸಂಖ್ಯೆ ಭಾರಿ ಇಳಿಕೆ

ದೇಶದ ಒಟ್ಟಾರೆ ಸೋಂಕಿತರ ಪೈಕಿ ಶೇ.70ರಷ್ಟು ಸೋಂಕಿತರು ಕೇವಲ 2 ರಾಜ್ಯಗಳಲ್ಲೇ ಇದ್ದು, ಮಹಾರಾಷ್ಟ್ರ, ಕೇರಳ ರಾಜ್ಯಗಳಲ್ಲಿ ಶೇ.70 ಸೋಂಕಿತರಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಈ ನಡುವೆ ಬ್ರಿಟನ್ನಿನಲ್ಲಿ ಹೊಸದಾಗಿ ಕಂಡು ಬಂದ ರೂಪಾಂತರಿ ಕೊರೋನಾ ಸೋಂಕಿತರ ಸಂಖ್ಯೆ 153ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.







Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top