ಕರ್ನಾಟಕ
GOOD NEWS : ರಾಜ್ಯದಲ್ಲಿ ಇಂದು ಜಸ್ಟ್ 324 ಜನರಿಗೆ ಕೊರೋನಾ, ಮೂವರು ಸೋಂಕಿಗೆ ಬಲಿ

ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೋನಾ ಸಂಖ್ಯೆ ಇಳಿಕೆಯತ್ತ ಸಾಗಿದೆ. ಇಂದು ಹೊಸದಾಗಿ ಜಸ್ಟ್ 324 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 9,34,576ಕ್ಕೆ ಏರಿಕೆಯಾಗಿದೆ.
ಹಂ.ಪ.ನಾಗರಾಜಯ್ಯ ವಿಚಾರಣೆ ನಡೆಸಿರುವುದು ರಾಜ್ಯಕ್ಕೆ ಮಾಡಿದ ಅಪಮಾನ - ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಬೆಂಗಳೂರು ನಗರದಲ್ಲಿ 160 ಜನರು ಸೇರಿದಂತೆ ರಾಜ್ಯಾಧ್ಯಂತ 324 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 9,34,576ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 890 ಸೇರಿದಂತೆ ಇದುವರೆಗೆ 9,15,382 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 6,985 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.
BREAKING : ರಾಜ್ಯದಲ್ಲಿ 'ಗೋಹತ್ಯೆ ನಿಷೇಧ ಕಾಯ್ದೆ' ಜಾರಿ ನಂತ್ರ 'ವಿಜಯಪುರ'ದಲ್ಲಿ ಮೊದಲ ಪ್ರಕರಣ ದಾಖಲು
ಇನ್ನೂ ಇಂದು ಬೆಂಗಳೂರು ನಗರದಲ್ಲಿ ಇಬ್ಬರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬರು ಸೇರಿದಂತೆ ಮೂವರು ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಬಲಿಯಾದವರ ಸಂಖ್ಯೆ 12,190ಕ್ಕೆ ಏರಿಕೆಯಾಗಿದೆ.
ಉಚಿತ, ತಾಜಾ ಸುದ್ದಿಗಾಗಿ ನಮ್ಮ WhatAapp ಗ್ರೂಪ್ ಸೇರಿಕೊಳ್ಳಿ
https://bit.ly/3qRmLqX