Kannada News Now
1.7M Followers* ರಂಜಿತ್ ಶೃಂಗೇರಿ
ಬೆಂಗಳೂರು : ಶಿಕ್ಷಕ ಹುದ್ದೆಯ ಅಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಪ್ರೌಡಶಿಕ್ಷಣ ಇಲಾಖೆಯ ನಿರ್ದೇಶಕರು ಆದೇಶ ಹೊರಡಿಸಿದ್ದು, 2021-22 ನೇ ಸಾಲಿನಲ್ಲಿ ಸರ್ಕಾರಿ ಪ್ರೌಢ ಶಾಲೆಗಳಿಗೆ ಅವಶ್ಯವಿರುವ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಆದೇಶ ಹೊರಡಿಸಿದ್ದಾರೆ.
ಪ್ರತಿವರ್ಷ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಗುಣಮಟ್ಟ ಕಾಯ್ದುಕೊಳ್ಳಲು ಆಯಾ ಶಾಲೆಯ;್ಲಿ ಮಂಜೂರಾಗಿ ಖಾಲಿ ಇರುವ ವಿಷಯ ಬೋಧನೆ ಮಾಡುವ ಶಿಕ್ಷಕರ ಹುದ್ದೆಗಳ ಎದುರಾಗಿ ಅತಿಥಿ ಶಿಕ್ಷಕರೆ ನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿ ಹುದ್ದೆಗಳಿಗೆದುರಾಗಿ ಒಟ್ಟು 3253 ಅತಿಥಿ ಶಿಕ್ಷಕರನ್ನು ನೇನಕಾತಿ ಮಾಡಿಕೊಳ್ಳಲಾಗುವ ಅತಿಥಿ ಶಿಕ್ಷಕರಿಗೆ ಗೌರವಧನ ಪಾವತಿಸಲು ಜಿಲ್ಲಾವಾರು ಮತ್ತು ತಾಲೂಕುವಾರು ಶಿಕ್ಷಕರ ಹಾಗೂ ಅನುದಾನದ ವಿವರಗಳೊಂದಿಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಿದ್ದಾರೆ.
BIGG NEWS : ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಕೆಗೆ ರಾಜ್ಯ ಸರ್ಕಾರ ಆದೇಶ
ಎಕ್ಸ್‌ಪ್ರೆಸ್‌ವೇಗಳಲ್ಲಿ ಗರಿಷ್ಠ ವೇಗದ ಮಿತಿಯನ್ನು ಗಂಟೆಗೆ 140 ಕಿ.ಮೀ.ಗೆ ಹೆಚ್ಚಿಸುವ ಮಸೂದೆ ಮಂಡನೆ: ನಿತಿನ್ ಗಡ್ಕರಿ
ಮುಂದುವರೆದು. ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರದ ಆದೇಶದ ಕ್ರಮಗಳಂತೆ ಅತ್ಯಂತ ಅವಶ್ಯಕತೆ ಇರುವ ಕಡೆ ವಿಷಯವಾರು ಖಾಲಿ ಹುದ್ದೆಗಳ ಎದುರಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಕೆಲವು ಷರತ್ತಿಗೊಳಪಟ್ಟು ಅನುಮತಿ ನೀಡಲಾಗಿದ್ದು, ಸುತ್ತೋಲೆಯಲ್ಲಿ ಲಗತ್ತಿಸಿದ ನಿಯಮದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
Disclaimer
This story is auto-aggregated by a computer program and has not been created or edited by Dailyhunt Publisher: Kannada News Now