Sunday, 22 Nov, 7.59 am Kannada News Now

ಕರ್ನಾಟಕ
ಗುಡ್ ನ್ಯೂಸ್ : ಶೀಘ್ರದಲ್ಲೇ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ `ಅತಿಥಿ ಶಿಕ್ಷಕರ' ನೇಮಕ

ಬೆಂಗಳೂರು : 2021ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅವಶ್ಯಕವಿರುವ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ತಾಲೂಕುವಾರು, ಜಿಲ್ಲಾವಾರು ವಿವರಗಳ್ನು ಸಲ್ಲಿಸಲು ರಾಜ್ಯದ ಎಲ್ಲಾ ಜಿಲ್ಲೆಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪತ್ರದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆದೇಶಿಸಿಲಾಗಿದೆ. ಹೀಗಾಗಿ ಸದ್ಯದಲ್ಲಿಯೇ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅತಿಥಿ ಶಿಕ್ಷಕರ ನೇಮಕಕ್ಕೆ ಆದೇಶ ಹೊರ ಬೀಳಲಿದೆ. ಈ ಮೂಲಕ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಉದ್ಯೋಗ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್ ಸಿಗಲಿದೆ.

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು(ಆಡಳಿತ) ರಾಜ್ಯದ ಎಲ್ಲಾ ಜಿಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪತ್ರ ಬರೆದಿದ್ದು, 2020-21ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ತಾತ್ಕಾಲಿಕ ನೇಮಕಾತಿ ಮಾಡಿಕೊಳ್ಳಲು ಉದ್ದೇಶಿಸಿರುವ ತಾಲೂಕು, ಜಿಲ್ಲಾವಾರು ಬಿಡುಗಡೆ ಮಾಡಬೇಕಾದ ಅನುದಾನ ವಿವರಗಳೊಂದಿಗೆ ಪ್ರಸ್ತಾವನೆಯನ್ನು ಸಲ್ಲಿಸಲು ಉಲ್ಲೇಖಿತ ಸರ್ಕಾರದ ಪತ್ರದಲ್ಲಿ ಸೂಚಿಸಲಾಗಿದೆ.

ಈ ಕಚೇರಿಯ ಶಿಕ್ಷಕರ ತಂತ್ರಾಂಶದಿಂದ ಪಡೆದಿರುವ ಮಾಹಿತಿಯಂತೆ ಜಿಲ್ಲಾವಾರು ಖಾಲಿ ಹುದ್ದೆಗಳನ್ನು ಮಾಹಿತಿಯನ್ನು ಅಡಕಗೊಳಿಸಿದೆ. ಈ ಹುದ್ದೆಗಳ ಸಂಖ್ಯೆಯ ಮತಿಯೊಳಗೆ ಅವಶ್ಯಕತೆ ಇರುವ ಕಡೆ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ತಾಲ್ಲೂಕುವಾರು ಹುದ್ದೆಗಳ ವಿವರಗಳನ್ನು ಮೇಲ್ ಮೂಲಕ ಕಳುಹಿಸಿಕೊಡಲು ಸೂಚಿಸಿದ್ದಾರೆ. ಈ ಮಾಹಿತಿಯನ್ನು ಪಡೆದುಕೊಂಡು, ಮಾಹಿತಿಯನ್ನು ಆಧರಿಸಿ, ಶೀಘ್ರದಲ್ಲೇ ಅತಿಥಿ ಶಿಕ್ಷಕರ ನೇಮಕಕ್ಕೂ ಆದೇಶ ಹೊರಡಿಸಲಿದೆ.

ವರದಿ : ವಸಂತ ಬಿ ಈಶ್ವರಗೆರೆ



Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top