Dailyhunt Logo
  • Light mode
    Follow system
    Dark mode
    • Play Story
    • App Story
ಗುಂಪಾಗಿ 'SIR' ಪ್ರಕ್ರಿಯೆ ನಡೆಸಿದ 35 'BLO' ಗಳಿಗೆ ಶೋಕಾಸ್ ನೋಟಿಸ್ ಜಾರಿ : ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬು ಕುಮಾರ್

ಗುಂಪಾಗಿ 'SIR' ಪ್ರಕ್ರಿಯೆ ನಡೆಸಿದ 35 'BLO' ಗಳಿಗೆ ಶೋಕಾಸ್ ನೋಟಿಸ್ ಜಾರಿ : ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬು ಕುಮಾರ್

Kannada News Now 5 days ago

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ತನಿಖೆಗೆ ಮುಂದಾಗಿದ್ದು, ಸಾರ್ವಜನಿಕರು ಮತ್ತು ರಾಜಕೀಯ ಪಕ್ಷಗಳಿಂದ ಬಂದಿರುವ ದೂರುಗಳ ಆಧಾರದ ಮೇಲೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೇನಾ (ಅನ್ಬು ಕುಮಾರ್) ಅವರು ತಿಳಿಸಿದ್ದಾರೆ.

ಮತಪಟ್ಟಿ ಪರಿಷ್ಕರಣೆಯಲ್ಲಿ ನಡೆದಿರಬಹುದಾದ ಅಕ್ರಮಗಳ ಕುರಿತು ಬಂದಿರುವ ಎಲ್ಲ ದೂರುಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಇಡೀ ಪ್ರಕ್ರಿಯೆಯ ಸತ್ಯಾಸತ್ಯತೆಯನ್ನು ಹೊರತರಲು ಜಂಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ವಿಶೇಷ ಪರಿಶೀಲನೆ ನಡೆಸಲಾಗುತ್ತಿದೆ. ದೂರು ಬಂದಿರುವ ನಿರ್ದಿಷ್ಟ ಪ್ರದೇಶಗಳು ಮತ್ತು ವಿಧಾನಸಭಾ ಕ್ಷೇತ್ರಗಳ ಮೇಲೆ ಅಧಿಕಾರಿಗಳು ನಿಗಾ ಇಟ್ಟಿದ್ದು, ಶೀಘ್ರದಲ್ಲೇ ವರದಿ ಸಲ್ಲಿಕೆಯಾಗಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಚುನಾವಣಾ ಆಯೋಗದ ನಿಯಮಗಳ ಪ್ರಕಾರ, ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಗುಂಪಾಗಿ ಒಂದೇ ಕಡೆ ಕುಳಿತು ಅರ್ಜಿ ಸ್ವೀಕರಿಸುವ ಅಥವಾ ಪ್ರಕ್ರಿಯೆ ನಡೆಸುವಂತಿಲ್ಲ. ಆದರೆ, ಕೆಲವು ಕಡೆಗಳಲ್ಲಿ ನಿಯಮಗಳನ್ನು ಗಾಳಿಗೆ ತೂರಿ, ಗುಂಪು ಗುಂಪಾಗಿ ಫಾರಂಗಳನ್ನು ಹಂಚಿಕೆ ಮಾಡಿರುವ ಮತ್ತು ನಿಯಮ ಬಾಹಿರವಾಗಿ ಪ್ರಕ್ರಿಯೆ ನಡೆಸಿರುವ ಬಗ್ಗೆ ಆಯೋಗಕ್ಕೆ ಖಚಿತ ದೂರುಗಳು ದಾಖಲಾಗಿವೆ.

ಮತದಾರರ ಪಟ್ಟಿ ಪರಿಷ್ಕರಣೆಯ ಮೂಲ ಉದ್ದೇಶವೇ ಪಾರದರ್ಶಕತೆ ಕಾಯ್ದುಕೊಳ್ಳುವುದು. ಇದಕ್ಕಾಗಿ ಬೂತ್ ಮಟ್ಟದ ಅಧಿಕಾರಿಗಳು (BLO) ಕಡ್ಡಾಯವಾಗಿ ಪ್ರತಿಯೊಬ್ಬರ ಮನೆ ಮನೆಗೆ ಭೇಟಿ ನೀಡಿ, ಅರ್ಹ ಮತದಾರರನ್ನು ಗುರುತಿಸಿ ಫಾರಂಗಳನ್ನು ವಿತರಿಸಬೇಕು ಹಾಗೂ ಅರ್ಜಿಗಳನ್ನು ಸ್ವೀಕರಿಸಬೇಕು. ಇದನ್ನು ಬಿಟ್ಟು ಕಚೇರಿಗಳಲ್ಲೋ ಅಥವಾ ಒಂದೇ ಸೂರಿನಡಿಯೋ ಗುಂಪಾಗಿ ಕಾರ್ಯನಿರ್ವಹಿಸುವುದು ಚುನಾವಣಾ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗುತ್ತದೆ ಎಂದು ಮುಖ್ಯ ಚುನಾವಣಾಧಿಕಾರಿಗಳು ಎಚ್ಚರಿಸಿದ್ದಾರೆ.

ಮನೆ ಮನೆಗೆ ಹೋಗದೆ ಗುಂಪು ಗುಂಪಾಗಿ ಫಾರಂ ವಿತರಣೆ ಮಾಡಿದ ಆರೋಪ ಮತ್ತು ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಆಯೋಗವು ಈಗಾಗಲೇ ಕಠಿಣ ಕ್ರಮಕ್ಕೆ ಮುಂದಾಗಿದೆ. ನಿಯಮ ಉಲ್ಲಂಘಿಸಿರುವ ಬೆಂಗಳೂರಿನ 35ಕ್ಕೂ ಹೆಚ್ಚು ಬೂತ್ ಮಟ್ಟದ ಅಧಿಕಾರಿಗಳಿಗೆ (BLO - Booth Level Officers) ಈಗಾಗಲೇ ಶೋಕಾಸ್ (ಕಾರಣ ಕೇಳಿ) ನೋಟಿಸ್ ಜಾರಿ ಮಾಡಲಾಗಿದೆ. ಅಧಿಕಾರಿಗಳ ಬೇಜವಾಬ್ದಾರಿತನ ಅಥವಾ ಅಕ್ರಮ ಸಾಬೀತಾದರೆ ಕಾನೂನು ಮುಖೇನ ಕಠಿಣ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಅನ್ಬು ಕುಮಾರ್ ಅವರು ಖಡಕ್ ಸಂದೇಶ ನೀಡಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Kannada News Now