Sunday, 22 Nov, 7.17 am Kannada News Now

ಕರ್ನಾಟಕ
ಹಾವೇರಿ ರೈಲು ನಿಲ್ದಾಣಕ್ಕೆ `ಮೈಲಾರ ಮಹದೇವಪ್ಪ' ಹೆಸರು : ರಾಜ್ಯ ಸರ್ಕಾರದಿಂದ ಅಧಿಸೂಚನೆ

ಬೆಂಗಳೂರು : ರಾಜ್ಯ ಸರ್ಕಾರವು ಹಾವೇರಿ ರೈಲು ನಿಲ್ದಾಣದ ಹೆಸರನ್ನು ಮಹದೇವಪ್ಪ ಮೈಲಾರ ರೈಲ್ವೆ ನಿಲ್ದಾಣ ಎಂದು ಬದಲಾಯಿಸಿ ಗೆಜೆಟ್ ಅಧಿಸೂಚನೆ ಹೊರಡಿಸಿದೆ.

ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ರೈಲು ನಿಲ್ದಾಣದ ಹೆಸರನ್ನು ಬದಲಾಯಿಸಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಈ ಅಧಿಸೂಚನೆ ಹೊರಡಿಸಿದೆ. ಮಹಾದೇವಪ್ಪ ಅವರು ತಮ್ಮ 18 ನೇ ವಯಸ್ಸಿನಲ್ಲಿ ಮಹಾತ್ಮ ಗಾಂಧೀಜಿ ಅವರ ಪ್ರಭಾವಕ್ಕೆ ಒಳಗಾಗಿ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದ್ದರು. ಗಾಂಧೀಜಿ ಅವರ ನೇತೃತ್ವದಲ್ಲಿ ನಡೆದ ದಂಡಿ ಸತ್ಯಾಗ್ರಹದಲ್ಲೂ ಪಾಲ್ಗೊಂಡಿದ್ದರು. ಇದೀಗ ಅವರ ಸ್ಮರಣಾರ್ಥ ಹಾವೇರಿ ರೈಲು ನಿಲ್ದಾಣಕ್ಕೆ ಅವರ ಹೆಸರನ್ನು ಇಡಲಾಗಿದೆ.



Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top