Thursday, 29 Oct, 7.17 am Kannada News Now

ಹೋಮ್
ಹವಾಮಾನ ಇಲಾಖೆಯಿಂದ ವಿಶೇಷ ಮಾಹಿತಿ : ನ. 1ರಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ಭಾರೀ ಮಳೆಯಿಂದಾಗಿ ತತ್ತರಿಸಿದ್ದ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ನವೆಂಬರ್ 1 ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಈ ಬಾರಿಯ ಹಿಂಗಾರು ಮಳೆ ತಡವಾಗಿ ಅಂದರೆ ಅಕ್ಟೋಬರ್ 28 ರಿಂದ ಆರಂಭವಾಗಲಿದೆ. ಮುಂಗಾರು ಅ.24 ರ ವರೆಗೂ ಮುಂದುವರಿಯುವ ಮೂಲಕ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿಸಿತ್ತು. ಇದೀಗ ದಕ್ಷಿಣ ಒಳನಾಡಿನ ವ್ಯಾಪ್ತಿಯಲ್ಲೇ ಹೆಚ್ಚು ಪ್ರಭಾವ ಬೀರುವ ಹಿಂಗಾರು ಮಳೆ ಅ.28 ರಿಂದ ಆರಂಭವಾಗುವುದು ಬಹುತೇಕ ಖಚಿತವಾಗಿದೆ.

ನವೆಂಬರ್ 1 ರ ಹೊತ್ತಿಗೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುಉವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಿರಲಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top