Thursday, 04 Mar, 8.56 am Kannada News Now

ಕರ್ನಾಟಕ
ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ `ಫೇಸ್ ಬುಕ್' ಖಾತೆ ಹ್ಯಾಕ್!

ಬೆಂಗಳೂರು : ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರ ಫೇಸ್ ಬುಕ್ ಖಾತೆ ಹ್ಯಾಕ್ ಮಾಡಿರುವ ಕಿಡಿಗೇಡಿಗಳು, ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ.

ಹೌದು,ಈ ಕುರಿತು ಸ್ವತಃ ಭಾಸ್ಕರ್ ರಾವ್ ಅವರೇ ತಮ್ಮ ಫೇಸ್ ಬುಕ್ ನಲ್ಲಿ ತಿಳಿಸಿದ್ದಾರೆ. ನನ್ನ ಅಕೌಂಟ್ ಹ್ಯಾಕ್ ಆಗಿದೆ. ಹಣ ಕಳುಹಿಸಿ ಎಂದು ಯಾವುದಾದರೂ ಸಂದೇಶಗಳು ಫೇಸ್ ಬುಕ್ ನಲ್ಲಿ ಬಂದರೆ ದಯವಿಟ್ಟು ಹಣ ಕಳುಹಿಸಬೇಡಿ. ನನ್ನ ಅಕೌಂಟ್ ಹ್ಯಾಕ್ ಆಗಿದ್ದರೂ, ನಾನು ಹಣ ಕೇಳುವುದಿಲ್ಲ ಎಂದು ಪೊಸ್ಟ್ ಮಾಡಿದ್ದಾರೆ.

ಇತ್ತೀಚೆಗೆ ಆನ್ ಲೈನ್ ಖದೀಮರ ಹಾವಳಿ ಹೆಚ್ಚಾಗಿದ್ದು, ಜನ ಸಾಮಾನ್ಯರು, ಪೊಲೀಸರು, ಹಿರಿಯ, ಕಿರಿಯ ಅಧಿಕಾರಿಗಳು, ಸೆಲೆಬ್ರಿಟಿಗಳು ಸೇರಿದಂತೆ ಎಲ್ಲರ ಹೆಸರಿನಲ್ಲಿ ನಕಲಿ ಫೇಸ್ ಬುಕ್, ಇನ್ ಸ್ಟಾಗ್ರಾಂ ಖಾತೆ ತೆರೆಯುವ ಖದೀಮರು ಹಣಕ್ಕೆ ಬೇಡಿಕೆ ಇಡುತ್ತಿದ್ದು, ಹಣ ವರ್ಗಾವಣೆ ಮಾಡಿಸಿಕೊಂಡು ಮೋಸ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top