Kannada News Now

1.7M Followers

JOB ALERT : 'SSLC' ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿಉದ್ಯೋಗವಕಾಶ |KSP Recruitement 2022

19 Sep 2022.4:11 PM

ಬೆಂಗಳೂರು : 'SSLC' ಪಾಸಾದವರಿಗೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿಉದ್ಯೋಗವಕಾಶವಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR / DAR) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ (Karnataka State Police Recruitment) ಅಧಿಕೃತ ವೆಬ್‌ಸೈಟ್ ksp.karnataka.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟು 3484 ಹುದ್ದೆಗಳಿದ್ದು, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸಲು

ಕನಿಷ್ಠ ವಯೋಮಿತಿ: 18 ವರ್ಷ ಹಾಗೂ ಗರಿಷ್ಠ ವಯೋಮಿತಿ 25 ವರ್ಷ ಮೀರಿರಬಾರದು. ಹಾಗೂ SC, ST, OBC (2A, 2B, 3A, 3B) ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 27 ವರ್ಷ ನಿಗದಿಪಡಿಸಲಾಗಿದೆ. ಕರ್ನಾಟಕ ಬುಡಕಟ್ಟು ಜನಾಂಗದವರಿಗೆ ಗರಿಷ್ಠ ವಯೋಮಿತಿ 30 ವರ್ಷ ನಿಗದಿಪಡಿಸಲಾಗಿದೆ.

ಸಾಮಾನ್ಯ ಅಭ್ಯರ್ಥಿಗಳಿಗೆ- 400 ರೂ. ಹಾಗೂ ಪರಿಶಿಷ್ಟ ಜಾತಿ/ಪಂಗಡ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ- 200 ರೂ ಅರ್ಜಿ ಶುಲ್ಕವಿದ್ದು, ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 23500 ರಿಂದ 47650 ರೂ.ವರೆಗೆ ವೇತನ ಸಿಗಲಿದೆ.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ - ಸೆಪ್ಟೆಂಬರ್ 19, 2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ - ಅಕ್ಟೋಬರ್ 31, 2022.

ಹೆಚ್ಚಿನ ಮಾಹಿತಿಗಾಗಿ 080-22943346 ಸಂಪರ್ಕಿಸಬಹುದಾಗಿದೆ. https://ksp.karnataka.gov.in/ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

BIGG NEWS: ಕುಂಬಳಕಾಯಿ ಕಳ್ಳ ಅಂದರೆ ನೀವ್ಯಾಕೆ ಹೆಗಲು ಮುಟ್ಟಿ ಕೊಳ್ಳುತ್ತೀರಿ ಎಂದು ಜಾರ್ಜ್‌ ಗೆ ಸಿಎಂ ಬೊಮ್ಮಾಯಿ ಅಂದಿದ್ಯಾಕೆ ಗೊತ್ತಾ?

BIGG NEWS: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಮುನ್ನ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ಶಶಿ ತರೂರ್ | Shashi Tharoor meets Sonia Gandhi


Disclaimer

Disclaimer

This story is auto-aggregated by a computer program and has not been created or edited by Dailyhunt Publisher: Kannada News Now

#Hashtags