Sunday, 02 Aug, 6.48 am Kannada News Now

ಭಾರತ
ಕಳ್ಳಭಟ್ಟಿ ದುರಂತ : ಪಂಜಾಬ್ ನಲ್ಲಿ ಸಾವಿನ ಸಂಖ್ಯೆ 86 ಕ್ಕೆ ಏರಿಕೆ

ಚಂಡೀಗಡ: ಪಂಜಾಬ್‌ನಲ್ಲಿ ಕಲಬೆರಕೆ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ 86 ಕ್ಕೆ ಏರಿಕೆಯಾಗಿದ್ದು, ಮೃತರ ಕುಟುಂಬದವರಿಗೆ ಮುಖ್ಯಮಂತ್ರಿ ಕ್ಯಾ.ಅಮರೀಂದರ್ ಸಿಂಗ್ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.

ತರ್ನ ಟರಾನ್ ಜಿಲ್ಲೆಯೊಂದರಲ್ಲಿ ಮೃತಪಟ್ಟವರ ಸಂಖ್ಯೆ 63 ಕ್ಕೆ ತಲುಪಿದೆ ಎಂದು ಜಿಲ್ಲಾಧಿಕಾರಿ ಕುಲ್ವಂತ್ ಸಿಂಗ್ ತಿಳಿಸಿದ್ದಾರೆ. ಅಮೃತಸರದಲ್ಲಿ 12 ಮಂದಿ ಹಾಗೂ ಗುರುದಾಸ್ ಪುರದ ಬಟಾಲದಲ್ಲಿ ಇದುವರೆಗೆ 11 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ಇನ್ನೂ, ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಜಲಂಧರ್ ವಿಭಾಗದ ಕಮಿಷನರ್ ಅವರನ್ನು ನೇಮಕ ಮಾಡಲಾಗಿದ್ದು, ಘಟನೆ ಸಂಬಂಧ ಆರೋಪಿಗಳಿಗೆ ಸರಿಯಾದ ಶಿಕ್ಷೆ ವಿಧಿಸಬೇಕೆಂದು ಮುಖ್ಯಮಂತ್ರಿ ಅಮರೀಂದರ್ ಸಿಂಗ್ ನಿನ್ನೆ ಟ್ವೀಟ್ ನಲ್ಲಿ ಸ್ಪಷ್ಟಪಡಿಸಿದ್ದರು.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top