Monday, 21 Jun, 7.29 pm Kannada News Now

ಕರ್ನಾಟಕ
ಖಾಸಗಿ ಶಾಲೆಗಳ ಶುಲ್ಕ ವಿಚಾರ : ಜೂ.29 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಸರ್ಕಾರ ಮತ್ತು ಖಾಸಗಿ ಶಾಲೆಗಳ ನಡುವಿನ ಶುಲ್ಕ ಸಮರ ಕೋರ್ಟ್ ಮೆಟ್ಟಿಲೇರಿದ್ದು, ಇಂದು ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಕೋರ್ಟ್ ಅರ್ಜಿ ವಿಚಾರಣೆಯನ್ನು ಜೂನ್ 29 ಕ್ಕೆ ಮುಂದೂಡಿದೆ.

ಇಂದು ರಾಜ್ಯ ಸರ್ಕಾರದ ಮಧ್ಯಂತರ ಅರ್ಜಿ ವಿಚಾರಣೆ ನಡೆದು, ಆಕ್ಷೇಪಣೆ ಸಲ್ಲಿಸಲು ಖಾಸಗಿ ಶಾಲೆಗಳಿಂದ ಕಾಲಾವಕಾಶ ಕೇಳಲಾಯಿತು. ಈ ಹಿನ್ನೆಲೆ ವಿಚಾರಣೆಯನ್ನು ಜೂನ್ 29 ಕ್ಕೆ ಮುಂದೂಡಿಕೆ ಮಾಡಿದೆ.

ಖಾಸಗಿ ಶಾಲೆಗಳಲ್ಲಿನ ಬೋಧನಾ ಶುಲ್ಕ ವಿಚಾರವಾಗಿ ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮಧ್ಯಂತರ ಅರ್ಜಿ ಸಲ್ಲಿಸಿತ್ತು. ಶೇ. 70 ರಷ್ಟು ಶುಲ್ಕ ಪಡೆಯುವಂತೆ ರಾಜ್ಯ ಸರ್ಕಾರ ಆದೇಶ ನೀಡಿತ್ತು. ಶೇ. 30 ರಷ್ಟು ಶುಲ್ಕ ರಿಯಾಯಿತಿ ನೀಡುವಂತೆ ಸೂಚನೆ ನೀಡಿದೆ. ಹೀಗಾಗಿ ಇದರ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟ ರಿಟ್ ಅರ್ಜಿ ಸಲ್ಲಿಸಿತ್ತು.

ಕಾಂಗ್ರೆಸ್ ಪಕ್ಷದಲ್ಲಿ ಗುಂಪುಗಾರಿಕೆಗೆ ಅವಕಾಶವಿಲ್ಲ : ಡಿ.ಕೆ ಶಿವಕುಮಾರ್

ಕೊರೊನಾದಿಂದ ಪೂರ್ಣ ಶುಲ್ಕ ಭರಿಸಲು ಪೋಷಕರಿಗೆ ತೊಂದರೆಯಾಗುತ್ತದೆ. ಲಾಕ್ ಡೌನ್ ನಿಂದ ಜನಸಾಮಾನ್ಯರ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಹೀಗಾಗಿ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ಸಮಿತಿ ರಚನೆ ಮಾಡಬೇಕು. ಸಮಿತಿ ಸೂಚನೆಯಂತೆ ಶುಲ್ಕ ನಿಗದಿ ಮಾಡಲು ಪರಿಶೀಲನೆ ನಡೆಸಬೇಕು ಸರ್ಕಾರ ಪ್ರಸ್ತಾಪಿಸಿದೆ. ಈ ಬಗ್ಗೆ ವಿಚಾರಣೆ ನಡೆಸಲು ಹೈಕೋರ್ಟ್ ಜೂನ್ 21 ಕ್ಕೆ ದಿನಾಂಕ ನಿಗದಿ ಮಾಡಿತ್ತು. ಇಂದು ಇಂದು ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಕೋರ್ಟ್ ಅರ್ಜಿ ವಿಚಾರಣೆಯನ್ನು ಜೂನ್ 29 ಕ್ಕೆ ಮುಂದೂಡಿದೆ.

BREAKING NEWS: ಪ್ರಸಿದ್ದ ಅಮರನಾಥ ಯಾತ್ರೆ ಸತತ ಎರಡನೇ ವರ್ಷವೂ ರದ್ದು







Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top