Thursday, 01 Oct, 5.20 pm Kannada News Now

ಕರ್ನಾಟಕ
ಕೊರೊನಾ ಗೆದ್ದ ಡಿಸಿಎಂ ಅಶ್ವತ್ಥ್ ನಾರಾಯಣ್: ರಾಜ್ಯದ ಜನತೆಗೆ ನೀಡಿದ ಸಂದೇಶವೇನು ಗೊತ್ತಾ..?

ಬೆಂಗಳೂರು: ಕರ್ನಾಟಕ ಡಿಸಿಎಂ ಅಶ್ವತ್ಥ್ ನಾರಾಯಣ್ ಮಹಾಮಾರಿ ಕೊರೊನಾ ಗೆದ್ದು ಸಂಪೂರ್ಣವಾಗಿ ಗುಣ ಮುಖರಾಗಿದ್ದು, ಸೋಂಕಿನಿಂದ ಬಚಾವ್ ಆಗಲು ಮಾಸ್ಕ್ ಅತ್ಯುತ್ತಮ ಅಸ್ತ್ರವಾಗಿದೆ ಎನ್ನುವ ಸಂದೇಶವನ್ನ ರಾಜ್ಯದ ಜನತೆಗೆ ರವಾನಿಸಿದ್ದಾರೆ.

ಹೌದು, ಕೊರೊನಾ ಸೋಂಕಿಗೆ ತುತ್ತಾಗಿ ಹಲವಾರು ದಿನ ಮನೆಯಲ್ಲೇ ಕ್ವಾರಂಟೈನ್‌ ಆಗಿ ಚಿಕಿತ್ಸೆ ಪಡೆದಿದ್ದ ಅವರು ಗುರುವಾರ ಸಂಪುಟ ಹಾಜರಾಗಿದ್ರು. ನಂತರ ಸುದ್ದಿಗಾರರೊಂದಿದೆ ಮಾತನಾಡಿದ ಅವ್ರು, ಮಾಸ್ಕ್ ಹಾಕಿಕೊಳ್ಳುವುದ್ರಿಂದ ಸೋಂಕಿನಿಂದ ತಪ್ಪಿಸಿಕೊಳ್ಳಬಹುದು. ವೈಜ್ಞಾನಿಕವಾಗಿಯೂ ಈ ಅಂಶ ಸಾಬೀತಾಗಿದ್ದು, ಸಾರ್ವಜನಿಕರು ಇದನ್ನು ಅರ್ಥ ಮಾಡಿಕೊಂಡು ಮಾಸ್ಕ್ ಅನ್ನು ತಪ್ಪದೇ ಹಾಗೂ ಶುಚಿ ಮಾಡಿಕೊಂಡು ಬಳಸಬೇಕು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಇನ್ನು ಕೊರೊನಾ ಸೋಂಕು ಹಗುರವಾಗಿ ತೆಗೆದುಕೊಳ್ಳುವ ಕಾಯಿಲೆಯೇನು ಅಲ್ಲ. ಅದು ಖಂಡಿತಾ ಮಾರಕ ವೈರಸ್. ಸ್ವತಃ ನಾನೇ ಸೋಂಕಿತನಾಗಿ ಚಿಕಿತ್ಸೆ ಪಡೆದು ಗುಣಮುಖನಾಗಿ ಹೊರಗೆ ಬಂದಿದ್ದೇನೆ. ಸೋಂಕು ತಗುಲುವ ಮುನ್ನ, ಗುಣಮುಖನಾದ ನಂತರ ಹೇಗೆ ಆರೋಗ್ಯ ಇರುತ್ತದೆ ಎಂಬ ಅನುಭವ ಸ್ವತಃ ನನಗೇ ಆಗಿದೆ. ಕ್ವಾರಂಟೈನ್ ಆಗಿ ನಾನು ಎದುರಿಸಿದ ಕಷ್ಟದ ಪರಿಸ್ಥಿತಿಯನ್ನು ಬೇರಾರೂ ಎದುರಿಸುವುದು ಬೇಡ. ಎಲ್ಲರೂ ಸುರಕ್ಷಿತವಾಗಿರಬೇಕು ಎಂಬುದು ನನ್ನ ಕಾಳಜಿ ಎಂದಿದ್ದಾರೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top