Wednesday, 22 Aug, 7.57 am Kannada News Now

ಕರ್ನಾಟಕ
ಲೋಕಸಭೆ ಚುನಾವಣೆಯ ಕೈ ಸಂಭಾವ್ಯರ ಪಟ್ಟಿ ನೋಡಿ ಸಿಟ್ಟಾದ ರಾಹುಲ್ ಗಾಂಧಿ

ನವದೆಹಲಿ: ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು, ಜಿಲ್ಲಾವಾರು ಮುಖಂಡರ ಸಭೆ ನಡೆಸಿ ಲೋಕಸಭಾ ಚುನಾವಣೆಗೆ ಸಂಭಾವ್ಯರ ಪಟ್ಟಿ ಸಿದ್ಧಪಡಿಸಿದ್ದಾರೆ.

ಈ ನಡುವೆ ಲೋಕಸಭೆ ಚುನಾವಣೆಗೆ ಸಂಬಂಧಿಸಿದ ರಾಜ್ಯ ಕಾಂಗ್ರೆಸ್‌ ಸಂಭಾವ್ಯರ ಪಟ್ಟಿ ನೋಡಿದ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಸಿಟ್ಟಾಗಿದ್ದಾರೆ ಎನ್ನಲಾಗಿದೆ.

ವಿಧಾನಸಭೆ ಚುನಾವಣೆಯಲ್ಲಿ ಸೋತವರು, ವರ್ಚಸ್ವಿಗಳಲ್ಲದವರು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲ್ಲುವ ಯೋಗ್ಯತೆ ಇಲ್ಲದವರ ಹೆಸರನ್ನೂ ಪಟ್ಟಿಗೆ ಸೇರಿಸಲಾಗಿದೆ. ಇದನ್ನು ಗಮನಿಸುತ್ತಿದ್ದಂತೆ ರಾಹುಲ್‌ ಗರಂ ಆಗಿದ್ದಾರೆ ಎನ್ನಲಾಗಿದೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top