Dailyhunt Logo
  • Light mode
    Follow system
    Dark mode
    • Play Story
    • App Story
ಮದುವೆ ವಿಚಾರಕ್ಕೆ ವ್ಯಕ್ತಿಯ ಮೇಲೆ ದೊಣ್ಣೆ, ಬಾಟಲಿಯಿಂದ ಹಲ್ಲೆ ನಡೆಸಿದ್ದ ಶಿಕ್ಷಕಿಗೆ ಜೈಲು ಶಿಕ್ಷೆ!

ಮದುವೆ ವಿಚಾರಕ್ಕೆ ವ್ಯಕ್ತಿಯ ಮೇಲೆ ದೊಣ್ಣೆ, ಬಾಟಲಿಯಿಂದ ಹಲ್ಲೆ ನಡೆಸಿದ್ದ ಶಿಕ್ಷಕಿಗೆ ಜೈಲು ಶಿಕ್ಷೆ!

Kannada News Now 1 week ago

ಶಿವಮೊಗ್ಗ: ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಇಲ್ಲಿನ ಒಂದನೇ ಹೆಚ್ಚುವರಿ ಸಿಜೆ ಮತ್ತು ಸಿಜೆಎಂ ನ್ಯಾಯಾಲಯವು ಶಿಕ್ಷಕಿಗೆ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ಪ್ರಕಟಿಸಿದೆ.

ಮಲವಗೊಪ್ಪದ ಸಕ್ಕರೆ ಕಾರ್ಖಾನೆ ಸಮೀಪದ ನಿವಾಸಿ ನಸೀನಾ ಬಾನು ಶಿಕ್ಷೆಗೆ ಗುರಿಯಾದ ಅಪರಾಧಿ.

ಪ್ರಕರಣದ ಹಿನ್ನೆಲೆ

ಮಲವಗೊಪ್ಪದ ನಿವಾಸಿ ಸಕ್ರೀಯ ಎಂಬುವವರ ಕಿರಿಯ ಸಹೋದರಿಯ ವಿವಾಹ ವಿಚಾರಕ್ಕೆ ಸಂಬಂಧಿಸಿದಂತೆ ನಸೀನಾ ಬಾನು ಹಾಗೂ ಮತ್ತೊಬ್ಬ ವ್ಯಕ್ತಿ ತಕರಾರು ತೆಗೆದಿದ್ದರು. ಮಾತಿಗೆ ಮಾತು ಬೆಳೆದು ಸಕ್ರೀಯ ಅವರ ಮೇಲೆ ದೊಣ್ಣೆ ಮತ್ತು ಗಾಜಿನ ಬಾಟಲಿಯಿಂದ ಹಲ್ಲೆ ನಡೆಸಿ, ಕೊಲೆ ಬೆದರಿಕೆಯೊಡ್ಡಿದ್ದರು. ಹಲ್ಲೆಯಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿ ವಿಚಾರಣೆ ಹಂತದಲ್ಲೇ ಮೃತಪಟ್ಟಿದ್ದಾರೆ.

ಈ ಕೃತ್ಯದ ಕುರಿತು ಸಕ್ರೀಯ ಅವರು ತುಂಗಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ಸಮಗ್ರ ತನಿಖೆ ನಡೆಸಿದ ತನಿಖಾಧಿಕಾರಿ ರಾಮಕುಮಾರ್ ವಿ., ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದರು.

ನ್ಯಾಯಾಲಯದ ತೀರ್ಪು

ಪ್ರಕರಣದ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ, ಉಭಯ ಬಣಗಳ ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಪದ್ಮಾಕರ ವನಕುದ್ರೆ ಅವರು, ಭಾರತೀಯ ದಂಡ ಸಂಹಿತೆಯ ಕಲಂ 323, 324 ಹಾಗೂ 506 ರ ಅಡಿಯಲ್ಲಿ ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿದ್ದಾರೆ. ಈ ಅಪರಾಧಗಳಿಗಾಗಿ ಆರೋಪಿ ನಸೀನಾ ಬಾನು ಅವರಿಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ಗೋವಿಂದರಾಜ್ ಎನ್. ಪ್ರಬಲ ವಾದ ಮಂಡಿಸಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: Kannada News Now