Sunday, 11 Apr, 12.26 pm Kannada News Now

ಕರ್ನಾಟಕ
ನೈಟ್ ಕರ್ಪ್ಯೂ ಗೆ ರಾಜ್ಯದ ಜನರು ಸಹಕಾರ ಕೊಡಬೇಕು : ಸಿಎಂ ಬಿಎಸ್ ವೈ ಮನವಿ

ರಾಯಚೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಈ ಕುರಿತು ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಾದ ಕಾರಣ 8 ನಗರಗಳಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಯಾರೂ ನೈಟ್ ಕರ್ಪ್ಯೂ ಉಲ್ಲಂಘನೆ ಮಾಡಬಾರದು. ಇಂದಿನಿಂದ ಲಸಿಕೆ ಉತ್ಸವಕ್ಕೆ ಚಾಲನೆ ನೀಡಲಾಗಿದ್ದು, ಎಲ್ಲರೂ ಕೊರೊನಾ ಲಸಿಕೆ ಹಾಕಿಸಿಕೊಳ್ಳಿ ಎಂದು ಹೇಳಿದ್ದಾರೆ.

ಪ್ರಧಾಣನಿ ಮೋದಿ ನನ್ನ ಜೊತೆ ಮಾತನಾಡಿದ್ದಾರೆ. ಎಲ್ಲಾ ವಿಚಾರಗಳ ಕುರಿತು ಪ್ರಧಾನಿ ಮೋದಿ ಅವರ ಗಮನಕ್ಕೆ ತಂದಿದ್ದೇನೆ. ಕೊರೊನಾ ಹೆಚ್ಚಿರುವ ಸ್ಥಳಗಳಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಜನರು ಮಾಸ್ಕ್, ಸಾಮಾಜಿಕ ಅಂತರ ಪಾಲಿಸಬೇಕು, ನೈಟ್ ಕರ್ಪ್ಯೂಗೆ ಸಹಕಾರ ಕೊಡಬೇಕು ಎಂದು ಹೇಳಿದರು.



Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top