Dailyhunt Logo
  • Light mode
    Follow system
    Dark mode
    • Play Story
    • App Story
ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ : ಸಿಎಂ ಸಿದ್ದರಾಮಯ್ಯ

ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ : ಸಿಎಂ ಸಿದ್ದರಾಮಯ್ಯ

Kannada News Now 3 weeks ago

ಬೆಂಗಳೂರು: ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ವಿದಾಯದ ಬ್ರೇಕ್‌ಫಾಸ್ಟ್‌ನಲ್ಲಿ ನುಡಿದಿದ್ದಾರೆ.

ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಹೇಳುವುವುದನ್ನು ಪಾಲನೆ ಮಾಡುವುದು ನನ್ನ ಕರ್ತವ್ಯ ಎಂದು ನುಡಿದಿದ್ದಾರೆ.

ಈ ಹಿಂದೆ ನಡೆದ ಒಪ್ಪಂದ ಸೂತ್ರ ಬಿಚ್ಚಿಟ್ಟ ಸಿದ್ದರಾಮಯ್ಯ ಸಂಪುಟ ಸಹೋದ್ಯೋಗಿಗಳ ಮುಂದೆ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದರು. ಇನ್ನು ಇದೇ ಸಂದರ್ಭದಲ್ಲಿ ಸಚಿವರ ಮುಂದೆ ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.

ಹೈಕಮಾಂಡ್ ಹೇಳಿದಂತೆ ಕರ್ನಾಟಕ ರಾಜ್ಯದ ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಿ ಮುಂದುವರೆಯಲಿದ್ದು 2028 ರ ವರೆಗೂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ. ಬಿಜೆಪಿಯಿಂದ ಅಲರ್ಟ್ ಆಗಿ ಇರಿ ನಾನು ಮಾಡಿರುವ ಕೆಲಸಗಳ ಬಗ್ಗೆ ನನಗೆ ಸಮಾಧಾನ ಇದೆ. ಎಲ್ಲಾ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಮುಂದೆ ಒಳ್ಳೆಯ ಕೆಲಸಗಳನ್ನು ಮಾಡಿಕೊಂಡು ಹೋಗಿ ಜನರಿಗೆ ಒಳ್ಳೆಯ ಯೋಜನೆಗಳನ್ನು ನೀಡಿ ಎಂದು ಸಿದ್ದರಾಮಯ್ಯ ಸಲಹೆ ನೀಡಿದರು.

Dailyhunt
Disclaimer: This content has not been generated, created or edited by Dailyhunt. Publisher: Kannada News Now