Dailyhunt Logo
  • Light mode
    Follow system
    Dark mode
    • Play Story
    • App Story
ನೇಪಾಳದಲ್ಲಿ ಭೀಕರ ಪ್ರವಾಹ : 489ಕ್ಕೆ ಏರಿದ ಸಾವಿನ ಸಂಖ್ಯೆ, 1500 ಜನ ನಾಪತ್ತೆ, 115 ಪ್ರವಾಸಿಗರ ರಕ್ಷಣೆ!

ನೇಪಾಳದಲ್ಲಿ ಭೀಕರ ಪ್ರವಾಹ : 489ಕ್ಕೆ ಏರಿದ ಸಾವಿನ ಸಂಖ್ಯೆ, 1500 ಜನ ನಾಪತ್ತೆ, 115 ಪ್ರವಾಸಿಗರ ರಕ್ಷಣೆ!

Kannada News Now 2 weeks ago

ನೇಪಾಳ : ನೇಪಾಳದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಉಂಟಾದ ಭೀಕರ ಪ್ರವಾಹ ಮತ್ತು ಸರಣಿ ಭೂಕುಸಿತದಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಈ ನೈಸರ್ಗಿಕ ವಿಕೋಪಕ್ಕೆ ಬಲಿಯಾದವರ ಸಂಖ್ಯೆ ಪ್ರಸ್ತುತ 489ಕ್ಕೆ ತಲುಪಿದ್ದು, ಮೃತರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಭೀತಿ ವ್ಯಕ್ತವಾಗಿದೆ.

ಸದ್ಯದ ವರದಿಗಳ ಪ್ರಕಾರ, ಪತ್ತೆಯಾದ 489 ಮೃತದೇಹಗಳಲ್ಲಿ ಕೇವಲ 96 ಶವಗಳ ಗುರುತನ್ನು ಮಾತ್ರ ಪತ್ತೆಹಚ್ಚಲು ಸಾಧ್ಯವಾಗಿದ್ದು, ಉಳಿದ 393 ಶವಗಳ ಗುರುತು ಪತ್ತೆ ಹಚ್ಚುವ ಕಾರ್ಯ ತೀವ್ರಗತಿಯಲ್ಲಿ ಸಾಗಿದೆ.

ಪ್ರವಾಹದ ತೀವ್ರತೆಗೆ ಸಿಲುಕಿ 1,500ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಸಂಕಷ್ಟಕ್ಕೆ ಸಿಲುಕಿದವರನ್ನು ಹುಡುಕಲು ನೇಪಾಳ ಸೇನೆ ಮತ್ತು ತುರ್ತು ರಕ್ಷಣಾ ಪಡೆಗಳು ಹೆಲಿಕಾಪ್ಟರ್‌ಗಳು ಹಾಗೂ ಬೋಟ್‌ಗಳ ಮೂಲಕ ಶೋಧ ಕಾರ್ಯಾಚರಣೆಯನ್ನು ಶರವೇಗದಲ್ಲಿ ನಡೆಸುತ್ತಿವೆ. ನದಿಗಳ ರಭಸದ ಹರಿವು ಹಾಗೂ ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿರುವುದು ರಕ್ಷಣಾ ಕಾರ್ಯಕ್ಕೆ ತೀವ್ರ ಸವಾಲಾಗಿ ಪರಿಣಮಿಸಿದೆ.

ಇನ್ನೊಂದೆಡೆ, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿದ್ದ ಪ್ರವಾಸಿಗರನ್ನು ಸುರಕ್ಷಿತವಾಗಿ ಹೊರತರುವ ಕಾರ್ಯವೂ ನಡೆಯುತ್ತಿದೆ. ಇದುವರೆಗೆ 85 ಭಾರತೀಯರು ಸೇರಿದಂತೆ ಒಟ್ಟು 115 ವಿದೇಶಿ ಪ್ರವಾಸಿಗರನ್ನು ರಕ್ಷಣಾ ಪಡೆಗಳು ಯಶಸ್ವಿಯಾಗಿ ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿವೆ. ನಾಪತ್ತೆಯಾಗಿರುವ ಭಾರತೀಯರು ಹಾಗೂ ಇತರರನ್ನು ಪತ್ತೆಹಚ್ಚಲು ಅಲ್ಲಿನ ಸ್ಥಳೀಯ ಆಡಳಿತದೊಂದಿಗೆ ಭಾರತೀಯ ರಾಯಭಾರ ಕಚೇರಿಯು ನಿಕಟ ಸಂಪರ್ಕದಲ್ಲಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannada News Now