Sunday, 11 Apr, 9.56 pm Kannada News Now

ಕರ್ನಾಟಕ
ನೀತಿ ಸಂಹಿತೆ ಉಲ್ಲಂಘನೆ ಆರೋಪ : 'HDK' ವಿರುದ್ಧ ಚುನಾವಣಾ ಆಯೋಗಕ್ಕೆ 'BJP' ದೂರು

ಬೀದರ್ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಏನಿದು ಘಟನೆ..?

ಏ.9ರಂದು ಬಸವಕಲ್ಯಾಣ ಉಪ ಚುನಾವಣೆ ಪ್ರಚಾರದ ವೇಳೆ ಹೆಚ್ಡಿಕೆ ಅವರು ಮತದಾರರಿಗೆ ಮನೆ ಮಂಜೂರಾತಿ ಕುರಿತು ಆಮಿಷ ತೋರಿಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಬಿಜೆಪಿ ದೂರಿದ್ದು, ಎಂಎಲ್‌ಸಿ ಡಾ. ತೇಜಸ್ವಿನಿ ಗೌಡ ಸೇರಿದಂತೆ ಮತ್ತಿತರರು ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

ಬಸವಕಲ್ಯಾಣದಲ್ಲಿ ನಡೆದ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಕುಮಾರಸ್ವಾಮಿ ಅವರು, ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ನಗರ ಮತ್ತು ಗ್ರಾಮೀಣ ವಾಸಿಗಳ ಪ್ರತಿ ಕುಟುಂಬಕ್ಕೆ ಮನೆ ಮಂಜೂರು ಮಾಡುತ್ತೇನೆ ಎಂದು ಮತದಾರರಿಗೆ ಆಮಿಷ ತೋರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ, ಆದ್ದರಿಂದ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ದೂರು ಸಲ್ಲಿಸಲಾಗಿದೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Kannada News Now
Top